ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಬಿಜೆಪಿ ಭ್ರಷ್ಟಾಚಾರ-ಮೋದಿ ಉತ್ತರಿಸಲಿ'

ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಸವಾಲು
Last Updated 22 ಏಪ್ರಿಲ್ 2013, 10:11 IST
ಅಕ್ಷರ ಗಾತ್ರ

ಉಡುಪಿ: `ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದರೆ, ಬಿಜೆಪಿಯ ಭ್ರಷ್ಟಾಚಾರ ಮತ್ತು ರಾಜ್ಯದಲ್ಲಿ ಅಭಿವೃದ್ಧಿ ಆಗದಿರುವ ಬಗ್ಗೆ ಉತ್ತರ ನೀಡಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸವಾಲು ಹಾಕಿದರು.

ಉಡುಪಿಯ ಕಾಂಗ್ರೆಸ್ ಭವನದಲ್ಲಿ ಭಾನುವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಬಂದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

`ಮೋದಿ ಅವರು ರಾಜ್ಯಕ್ಕೆ ಪ್ರಚಾರಕ್ಕೆ ಬರುವುದು ಬೇಡ ಎಂದು ನಾವು ಹೇಳುವುದಿಲ್ಲ. ಅವರು ಬರಲಿ, ಆದರೆ ಅವರು ಬಿ.ಎಸ್.ಯಡಿಯೂರಪ್ಪ ಅವರು ನಡೆಸಿದ ಭ್ರಷ್ಟಾಚಾರದ ಬಗ್ಗೆ ಉತ್ತರ ನೀಡಬೇಕು. ರಾಜ್ಯದಲ್ಲಿ ಬಿಜೆಪಿ ಮೂರು ಹೋಳಾಗಿದ್ದು ಏಕೆ ಎಂದು ಹೇಳಬೇಕು. ಗುಜರಾತ್‌ನಲ್ಲಿ ಅಭಿವೃದ್ಧಿ ಮಾಡಿದ್ದೇನೆ ಎಂದು ಹೇಳುವ ಮೋದಿ ಬಿಜೆಪಿ ಆಡಳಿತದಲ್ಲಿ ಕರ್ನಾಟಕದ ಪ್ರಗತಿ ಕುಂಠಿತ ಆಗಿರುವ ಬಗ್ಗೆ ಮಾತನಾ ಡಬೇಕು' ಎಂದರು.

ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಮುಖಂಡರು ಮನವೊಲಿಸಿದ ನಂತರ ನಾಮಪತ್ರ ಹಿಂದಕ್ಕೆ ಪಡೆದಿರುವ ಕಾಂಗ್ರೆಸ್ ಮುಖಂಡರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಪಕ್ಷದಲ್ಲಿ ಸಹ ಅವರಿಗೆ ಸ್ಥಾನ ನೀಡಲಾಗುತ್ತದೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. 15 ದಿನಗಳ ಹಿಂದೆಯೇ ಅವರನ್ನು ಆಹ್ವಾನಿಸಲಾಗಿತ್ತು. ಅವರೂ ಒಪ್ಪಿಗೆ ಸೂಚಿಸಿದ್ದರು. ಅದರಂತೆ ಭಾನುವಾರದಿಂದ ಪ್ರಚಾರದಲ್ಲಿ ತೊಡಗಿದ್ದಾರೆ ಎಂದರು.

ಕಾಂಗ್ರೆಸ್ ಚುನಾವಣೆಯಲ್ಲಿ ಎಷ್ಟು ಸ್ಥಾನಗಳನ್ನು ಗೆಲ್ಲುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಎಷ್ಟು ಸ್ಥಾನ ಗೆಲ್ಲುತ್ತೇವೆ ಎಂಬ ಸಂಖ್ಯೆ ಹೇಳುವುದಿಲ್ಲ. ಆದರೆ ಪಕ್ಷ ಸ್ವತಂತ್ರವಾಗಿ ಆಡಳಿತ ನಡೆಸುವಷ್ಟು ಸ್ಥಾನಗಳು ಲಭಿಸಲಿವೆ ಎಂದರು.
ಪ್ರಚಾರ ಸಮಿತಿ ಅಧ್ಯಕ್ಷ ವೀರಣ್ಣ ಮತ್ತೀಕಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT