ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ನಿರೀಕ್ಷಿತ ಸ್ಥಾನ ಲಭಿಸಿಲ್ಲ: ಕಾಗೇರಿ

Last Updated 5 ಜನವರಿ 2011, 10:15 IST
ಅಕ್ಷರ ಗಾತ್ರ

ಶಿರಸಿ:  ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸುವ ನಿರೀಕ್ಷೆ ಇತ್ತು. ಆದರೆ ಭಾರತೀಯ ಜನತಾ ಪಕ್ಷ ನಿರೀಕ್ಷಿತ ಸ್ಥಾನ ದೊರೆತಿಲ್ಲ. ಪಕ್ಷದ ಪ್ರಮುಖರ ಉಪಸ್ಥಿತಿಯಲ್ಲಿ ಈ ಸಂಗತಿಯನ್ನು ವಿಶ್ಲೇಷಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಮಂಗಳವಾರ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಜಿ.ಪಂ.ನಲ್ಲಿ ಬಿಜೆಪಿ ಸಮರ್ಥವಾಗಿ ವಿರೋಧ ಪಕ್ಷ ಸ್ಥಾನ ನಿರ್ವಹಿಸಲಿದೆ. ಮತದಾರರ ತೀರ್ಮಾನವನ್ನು ಒಪ್ಪಲೇ ಬೇಕು. ಸ್ಥಳೀಯ ಸಂಗತಿ, ಸಂದರ್ಭಗಳು ಕೆಲವೊಮ್ಮೆ ಅಭ್ಯರ್ಥಿಗಳ ಸೋಲು-ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪಕ್ಷದ ಶಿಸ್ತು ಮೀರಿ ಬಂಡಾಯ ಸ್ಪರ್ಧಿಸಿದವರ ವಿರುದ್ಧ ಕ್ರಮ ಕೈಕೊಳ್ಳಲಾಗುವುದು. ಜಿಲ್ಲೆಯ ಅಭಿವೃದ್ಧಿಗೆ ಅನುದಾನದ ಕೊರತೆ ಆಗದಂತೆ ಎಲ್ಲ ಶ್ರಮ ವಹಿಸಿ ಕೆಲಸ ಮಾಡಲಾಗುವುದು ಎಂದು ಅವರು ಹೇಳಿದರು. 

ಸಭಾಭವನ ಉದ್ಘಾಟನೆ ಇಂದು
ನವೀಕರಣಗೊಂಡ ನಗರಸಭಾ ಭವನದ ಉದ್ಘಾಟನಾ ಸಮಾರಂಭ ಜ.5ರ ಬೆಳಿಗ್ಗೆ 11.30ಗಂಟೆಗೆ ಏರ್ಪಾಟಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸುವರು. ನಗರಸಭೆ ಅಧ್ಯಕ್ಷ ರವಿ ಚಂದಾವರ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಸಂಸದ ಅನಂತಕುಮಾರ ಹೆಗಡೆ, ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ, ಸಹಾಯಕ ಆಯುಕ್ತ ಜಿ.ಜಗದೀಶ ಪಾಲ್ಗೊಳ್ಳುವರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT