ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಬಿಎಸ್‌ವೈ: ಮೋದಿ ರಾಯಭಾರ?

Last Updated 3 ಸೆಪ್ಟೆಂಬರ್ 2013, 19:50 IST
ಅಕ್ಷರ ಗಾತ್ರ

ಬೆಂಗಳೂರು: ಕೆಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿಗೆ ಕರೆತರುವ ಬಗ್ಗೆ ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳುವಂತೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಮನವಿ ಮಾಡಿರುವುದಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಡಿ.ವಿ.ಸದಾನಂದಗೌಡ ತಿಳಿಸಿದರು.

ಮೋದಿ ಅವರನ್ನು ಸೋಮವಾರ ಅಹಮದಾಬಾದ್‌ನಲ್ಲಿ ಭೇಟಿಯಾಗಿ ಪಕ್ಷ ಸಂಘಟನೆ, ಮುಂಬರುವ ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಲಾಗಿದೆ. ಈ ಸಂದರ್ಭದಲ್ಲಿ ಯಡಿಯೂರಪ್ಪ ಪಕ್ಷ ಸೇರ್ಪಡೆ ವಿಷಯದ ಬಗ್ಗೆಯೂ ಪ್ರಸ್ತಾವ ಆಗಿದೆ ಎಂದು ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಹಿಂದೆ ಪಕ್ಷ ತೊರೆದಿರುವ ನಾಯಕರನ್ನು ಪುನಃ ವಾಪಸ್ ಕರೆತರುವ ಬಗ್ಗೆ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದೇ 8ರಂದು ನವದೆಹಲಿಯಲ್ಲಿ ನಡೆಯುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಯಡಿಯೂರಪ್ಪ ವಿಷಯವನ್ನು ಪ್ರಸ್ತಾಪಿಸುವುದಾಗಿ ಮೋದಿ ಭರವಸೆ ನೀಡಿದ್ದಾರೆ ಎಂದರು.

`ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಬೇಕು. ಯಡಿಯೂರಪ್ಪ ಅವರು ಮರಳಿ ಪಕ್ಷಕ್ಕೆ ಬಂದರೆ ಮತಗಳು ವಿಭಜನೆ ಆಗುವುದನ್ನು ತಡೆಯಲು ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಈ ಪ್ರಯತ್ನ ನಡೆದಿದೆ. ಇದರಲ್ಲಿ ಯಾವುದೇ ವೈಯಕ್ತಿಕ ಹಿತಾಸಕ್ತಿ ಇಲ್ಲ. ಪಕ್ಷ ನನಗೆ ಎಲ್ಲ ಸ್ಥಾನಮಾನ ನೀಡಿದೆ. ಬಿಜೆಪಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕು ಎಂಬುದು ನನ್ನ ಆಶಯ' ಎಂದರು.

`ಯಡಿಯೂರಪ್ಪ ಒಂಟಿ ಸಲಗ. ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಮಿತ್ರರೂ ಅಲ್ಲ. ಕಹಿ ಘಟನೆಗಳನ್ನು ಮರೆತು ಆದಷ್ಟು ಬೇಗ ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಕರೆತಂದರೆ ಲೋಕಸಭಾ ಚುನಾವಣೆಗೆ ಅನುಕೂಲವಾಗುತ್ತದೆ' ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT