ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಸದಸ್ಯೆಯ ಜಾತಿ ಪ್ರಮಾಣ ಪತ್ರ ರದ್ದುಪಡಿಸಿದ ಡಿ.ಸಿ

Last Updated 11 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಓಕಳಿಪುರ ವಾರ್ಡ್‌ನ ಬಿಬಿಎಂಪಿ ಸದಸ್ಯೆ ಕ್ವೀನ್ ಎಜಿಜಬೆತ್ ಅವರ ಜಾತಿ ಪ್ರಮಾಣಪತ್ರವನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ರದ್ದುಪಡಿಸಿದ್ದಾರೆ.ತಹಶೀಲ್ದಾರ್ ನೀಡಿದ್ದ ಜಾತಿ ಪ್ರಮಾಣಪತ್ರವನ್ನು ಅನೂರ್ಜಿತಗೊಳಿಸಿ ಜಿಲ್ಲಾಧಿಕಾರಿಗಳು ಇದೇ 5ರಂದು ಆದೇಶ ಹೊರಡಿಸಿದ್ದಾರೆ.

`ಕ್ವೀನ್ ಎಲಿಜಬೆತ್ ಅವರು ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಬಿಬಿಎಂಪಿಯಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿ ಪಡೆದಿದ್ದಾರೆ~ ಎಂದು ಪಾಲಿಕೆಯ ಮಾಜಿ ಸದಸ್ಯೆ ಎನ್.ಲಕ್ಷ್ಮೀ, ವಿ.ಪುಷ್ಪವತಿ ಎಂಬುವರು ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗೆ ದೂರು ನೀಡಿದ್ದರು.

`ಎಲಿಜಬೆತ್ ಅವರು 2010ರ ಮಾರ್ಚ್ 8ರಂದು ಆದಿ ದ್ರಾವಿಡ ಜಾತಿಯ ಪ್ರಮಾಣಪತ್ರ ಪಡೆದಿದ್ದರು. ಇದರ ಆಧಾರದ ಮೇಲೆ ಅವರು ಚುನಾವಣೆಗೆ ಸ್ಪರ್ಧಿಸಿದ್ದರು~ ಎಂದು ಅವರು ಆರೋಪಿಸಿದ್ದರು. ವಿಚಾರಣೆ ನಡೆಸಿ ಜಿಲ್ಲಾಧಿಕಾರಿಗಳು ಜಾತಿ ಪ್ರಮಾಣಪತ್ರವನ್ನು ಅನೂರ್ಜಿತಗೊಳಿಸಿದ್ದಾರೆ.

`ಶಾಲೆಯ ದಾಖಲಾತಿಗಳಲ್ಲಿ ಕ್ರಿಶ್ಚಿಯನ್ ಧರ್ಮ ಎಂದು ನಮೂದಿಸಿದ್ದಾರೆ. ಆದರೆ, ಅವರು ಹಿಂದೂ ಧರ್ಮದ ಆದಿ ದ್ರಾವಿಡ ಜಾತಿಯ ಪ್ರಮಾಣಪತ್ರ ಪಡೆದು, ಚುನಾವಣೆ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಾರೆ~ ಎಂದು ಲಕ್ಷ್ಮೀ ಅವರ ಪರ ವಕೀಲರು ತಿಳಿಸಿದ್ದಾರೆ.

ಎನ್.ಲಕ್ಷ್ಮೀ ಮತ್ತು ವಿ.ಪುಷ್ಪವತಿ ಅವರು ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಎಲಿಜಬೆತ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT