ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಯೂಟ ತಯಾರಕರ ಪ್ರತಿಭಟನೆ

Last Updated 3 ಏಪ್ರಿಲ್ 2013, 6:37 IST
ಅಕ್ಷರ ಗಾತ್ರ

ಕೊಪ್ಪಳ: ಸಂಘಟನೆಯ ಸದಸ್ಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಹಾಗೂ ಸೇವೆಯನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್‌ನ ಜಿಲ್ಲಾ ಸಮಿತಿ ಸದಸ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಅಶೋಕ ವೃತ್ತದಿಂದ ತಹಸೀಲ್ದಾರ್ ಕಚೇರಿ ವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ನಂತರ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರರಿಗೆ ಸಲ್ಲಿಸಿದರು.

ಎಐಟಿಯುಸಿ ಜಿಲ್ಲಾ ಅಧ್ಯಕ್ಷ ಬಸವರಾಜ ಶೀಲವಂತರ ಮಾತನಾಡಿ, ಕೆಲವು ಶಾಲೆಗಳಲ್ಲಿ ಬಿಸಿಯೂಟ ತಯಾರಕರ ಮೇಲೆ ದೌರ್ಜನ್ಯ ನಡೆಸುತ್ತಿದ್ದು, ಇಂತಹ ಕೃತ್ಯಗಳಿಗೆ ಕೂಡಲೇ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರಿಗೆ ಸೇವಾ ಭದ್ರತೆ ನೀಡಬೇಕು ಹಾಗೂ ಯೋಜನೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣಗೊಳಿಸಬಾರದು ಎಂದು ಒತ್ತಾಯಿಸಿದರು.

ಅಗತ್ಯ ವಸ್ತುಗಳ ಬೆಲೆಗಳು ಏರಿವೆ. ಹೀಗಾಗಿ ಬೆಲೆ ಏರಿಕೆಗೆ ತಕ್ಕಂತೆ ಗೌರವ ಧನವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಪ್ರೋತ್ಸಾಹ ಧನವನ್ನು 10 ಸಾವಿರಕ್ಕೆ ಹೆಚ್ಚಳ ಮಾಡುವ ಜೊತೆಗೆ ಮನೆ ಬಾಡಿಗೆ ಹಣವನ್ನು ಸಹ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಅಡುಗೆ ಮಾಡುವ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಲ್ಲವೇ ಇತರ ಕಾರಣಗಳಿಂದ ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಸೂಕ್ತ ಪರಿಹಾರ ನೀಡಬೇಕು. ಬಿಸಿಯೂಟ ಕಾರ್ಯಕರ್ತೆಯರಿಗೆ ಆರೋಗ್ಯ ವಿಮಾ ಸೌಲಭ್ಯ ನೀಡಬೇಕು, ಅನುದಾನ ರಹಿತ ಖಾಸಗಿ ಶಾಲೆಗಳಿಗೂ ಬಿಸಿಯೂಟ ಯೋಜನೆಯನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದರು. ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ಪುಷ್ಪಾ ಮೇಸ್ತ್ರಿ, ಮುಖಂಡರಾದ ಗಾಳೆಪ್ಪ ಮುಂಗೋಲಿ, ನನ್ನುಸಾಬ ನೀಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT