ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಯೂಟದ ಯೋಜನೆಗೆ ಸಬ್ಸಿಡಿ ಸಿಲಿಂಡರ್- ಮನವಿ

Last Updated 12 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ: ಶಾಲೆಗಳಲ್ಲಿ ಜಾರಿಯಲ್ಲಿರುವ ಮಧ್ಯಾಹ್ನದ ಊಟದ ಯೋಜನೆಗೆ ನೀಡಲಾಗುತ್ತಿರುವ ಸಬ್ಸಿಡಿ ಸಹಿತದ ಎಲ್‌ಪಿಜಿ ಸಿಲಿಂಡರ್ ನೀಡುವುದನ್ನು ಮುಂದುವರಿಸಬೇಕು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ಸಚಿವ ಕಪಿಲ್ ಸಿಬಲ್ ಅವರು ಪೆಟ್ರೋಲಿಯಂ ಸಚಿವಾಲಯವನ್ನು ಒತ್ತಾಯಿಸಿದ್ದಾರೆ.

ಈ ಯೋಜನೆಗೂ ಸಬ್ಸಿಡಿ ಸಿಲಿಂಡರ್ ಮಿತಿ ಹೇರಿದರೆ ತೊಂದರೆಯಾಗುತ್ತದೆ ಮತ್ತು ಯೋಜನೆ ಮುಂದುವರಿಸುವುದೇ ಕಷ್ಟವಾಗುತ್ತದೆ ಎಂದು ವಿವರಿಸಿದ್ದಾರೆ.

ಪ್ರಮುಖ ಕಟ್ಟಡಗಳ ಸ್ಫೋಟ ಬೆದರಿಕೆ
ಮುಂಬೈ (ಪಿಟಿಐ): `
ಮುಂಬೈ ಹಾಗೂ ನಾಗಪುರದ ಪ್ರಮುಖ ಕಟ್ಟಡಗಳಲ್ಲಿ ಬಾಂಬ್ ಸ್ಫೋಟಿಸಲಾಗುವುದು~ ಎಂದು ಇಲ್ಲಿನ ಸಚಿವಾಲಯಕ್ಕೆ ಅನಾಮಧೇಯ ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ ಗುರುವಾರ ಎರಡೂ ನಗರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿತ್ತು.

`ಸ್ವಲ್ಪ ಸಮಯದ ಇದು ಬಳಿಕ ಹುಸಿ ಬಾಂಬ್ ಪತ್ರವೆಂದು ತಿಳಿಯಿತು. ಆದರೆ ಯಾವುದನ್ನೂ ಲಘುವಾಗಿ ಪರಿಗಣಿಸುವಂತಿಲ್ಲ~ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT