ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರದಲ್ಲಿ ಅಧಿಕಾರಿಗಳಿಗೆ ಸರ್ಕಾರದ ಕಟ್ಟೆಚ್ಚರಿಕೆ

Last Updated 19 ಫೆಬ್ರುವರಿ 2011, 18:05 IST
ಅಕ್ಷರ ಗಾತ್ರ

ಪಟ್ನಾ (ಐಎಎನ್‌ಎಸ್): ಮಾವೊವಾದಿಗಳು ಒರಿಸ್ಸಾದಲ್ಲಿ ಜಿಲ್ಲಾಧಿಕಾರಿಯನ್ನು ಅಪಹರಿಸಿರುವ ಹಿನ್ನೆಲೆಯಲ್ಲಿ ಬಿಹಾರದಲ್ಲೂ ನಕ್ಸಲ್‌ಪೀಡಿತ ಜಿಲ್ಲೆಗಳ ಉನ್ನತ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಮಾಡುವಾಗ ಎಚ್ಚರ ವಹಿಸಲು ಸರ್ಕಾರ ಸೂಚಿಸಿದೆ.

 ಬಿಹಾರದ 38 ಜಿಲ್ಲೆಗಳಲ್ಲಿ 34 ಜಿಲ್ಲೆಗಳು ನಕ್ಸಲ್ ಹಿಂಸಾಚಾರದಿಂದ ತತ್ತರಿಸಿದ್ದು ಈ ಭಾಗಗಳಲ್ಲಿರುವ ಉನ್ನತ ಅಧಿಕಾರಿಗಳು ತಮ್ಮ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸುವಂತೆ ರಾಜ್ಯಸರ್ಕಾರ ಕಿವಿಮಾತು ಹೇಳಿರುವುದಾಗಿ  ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕಚೇರಿಯ ಅಧಿಕಾರಿಯೊಬ್ಬರು ಶನಿವಾರ ಇಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT