ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೃಹತ್ ಪ್ರಮಾಣದ ಸ್ಫೋಟಕ ಸಾಮಗ್ರಿ ವಶ, ಒಬ್ಬನ ಸೆರೆ

Last Updated 16 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಭೋಪಾಲ್ (ಐಎಎನ್‌ಎಸ್): ಮಧ್ಯಪ್ರದೇಶದ ರೇವಾ ಜಿಲ್ಲೆಯ ಮನೆಯಲ್ಲಿದ್ದ ಮತ್ತು ಕಾರೊಂದರಲ್ಲಿ ಸಾಗಿಸುತ್ತಿದ್ದ ಬೃಹತ್ ಪ್ರಮಾಣದ ಸ್ಪೋಟಕ ಸಾಮಗ್ರಿಗಳನ್ನು ಪೊಲೀಸರು ಭಾನುವಾರ ವಶಪಡಿಸಿಕೊಂಡಿದ್ದು, ಈ ಸಂಬಂಧ ಒಬ್ಬನನ್ನು ಬಂಧಿಸಿದ್ದಾರೆ.

`ರೇವಾ ಜಿಲ್ಲೆಯ ರಾಜೇಶ್ ಪಟೇಲ್ ಮನೆಯಲ್ಲಿ 10 ಬಾಕ್ಸ್ ಜಿಲೆಟಿನ್ ಕಡ್ಡಿಗಳು, ಐದು ಸಾವಿರ ಡಿಟೊನೇಟರ್‌ಗಳನ್ನು ವಶಪಡಿಕೊಳ್ಳಲಾಗಿದೆ. ಹಾಗೆಯೇ ಕಾರ್‌ನಲ್ಲಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಆ ಕಾರನ್ನು ಬೆನ್ನಟ್ಟಿ ಹೋಗಿ ಸ್ಫೋಟಕ ಸಾಮಗ್ರಿಗಳನ್ನು ಜಪ್ತಿಮಾಡಿಕೊಳ್ಳಲಾಗಿದೆ. ಆರೋಪಿ ರಾಜೇಶ್ ಪಟೇಲ್ ತಲೆತಪ್ಪಿಸಿಕೊಂಡಿದ್ದಾನೆ~ ಎಂದು ಡಿಐಜಿ ಕೆ.ಪಿ. ಖರೆ ತಿಳಿಸಿದ್ದಾರೆ.

ಹರಿಯಾಣದ ಅಂಬಾಲದಲ್ಲಿ ನಾಲ್ಕು ದಿನಗಳ ಹಿಂದೆ 5 ಕೆ.ಜಿಗೂ ಹೆಚ್ಚು ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಂಡ ಪ್ರಕರಣದ ಬೆನ್ನಹಿಂದೆಯೇ ಮಧ್ಯಪ್ರದೇಶದಲ್ಲಿ ಇಂತಹದ್ದೇ ಪ್ರಕರಣ ನಡೆದಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT