ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಕಿ: ಕೂಡಲೇ ಮಾಹಿತಿ ನೀಡಲು ಮನವಿ

Last Updated 24 ಏಪ್ರಿಲ್ 2013, 5:39 IST
ಅಕ್ಷರ ಗಾತ್ರ

ಕುರುಗೋಡು: ಅಗ್ನಿ ದುರಂತ ನಡೆದ ಸ್ಥಳದಲ್ಲಿ ಸ್ಫೋಟಕ ವಸ್ತು ಅಥವಾ ವಿಷಪೂರಿತ ಅನಿಲ ಇದ್ದದ್ದು ಕಂಡುಬಂದರೆ ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ತಿಳಿಸಿ ಹೆಚ್ಚಿನ ಅನಾಹುತ ವನ್ನು ತಪ್ಪಿಸಬೇಕು ಎಂದು ಅಗ್ನಿಶಾಮಕ ಠಾಣೆ ಅಧಿಕಾರಿ ಜಿ.ಬಸವರಾಜ್ ಸಲಹೆ ಮಾಡಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಪ್ತಾಹ ದಿನಾಚರಣೆ ಅಂಗವಾಗಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿತ್ಯ ಉಪಯೋಗಿ ಬೆಂಕಿಯನ್ನು ಎಚ್ಚರಿಕೆಯಿಂದ ಬಳಸಬೇಕು. ಅಗ್ನಿ ಆಕಸ್ಮಿತಗಳು ಸಂಭವಿಸಿದ ಸಂದರ್ಭದಲ್ಲಿ ಸಣ್ಣ ಪ್ರಮಾಣದಲ್ಲಿ ಇರುವ ಸಂದರ್ಭದಲ್ಲಿಯೇ ನಿಯಂತ್ರಿಸಲು ಪ್ರಯತ್ನಿಸಬೇಕು. ನಿಯಂತ್ರಣಕ್ಕೆ ಪಾರದ ಸಂದರ್ಭದಲ್ಲಿ ಸಮೀಪದ ಶಾಮಕ ಠಾಣೆಗೆ ಮಾಹಿತಿ ನೀಡಬೇಕು ಎಂದು ಸಲಹೆ ಮಾಡಿದರು.   

ಅಗ್ನಿ ದುರಂತ, ನೆರೆಹಾವಳಿ, ಅನಿತ ದುರಂತ, ಗ್ಯಾಸ್ ಸಿಲಿಂಡರ್ ಸ್ಫೋಟದ ಸಂದರ್ಭದಲ್ಲಿ ಯಾವ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎನ್ನುವ ಬಗ್ಗೆ ಮಾಹಿತಿ ನೀಡಿದ ಅವರು ಸಿಬ್ಬಂದಿ ಯೊಂದಿಗೆ ಕೆಲವು ಪ್ರಾತ್ಯಕ್ಷಿಕೆ ಪ್ರದರ್ಶಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಪ್ರಾಚಾರ್ಯ ಜಿ.ಕೆ.ವೆಂಕಟೇಶಲು ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಶ್ರೀನಿವಾಸ ಸೇರಿದಂತೆ ಅಗ್ನಿಶಾಮಕ ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಗುರುಬಸಪ್ಪ ಸ್ವಾಗತಿಸಿದರು. ಉಪನ್ಯಾಸಕ ಮರಿ ಗಾದಿಲಿಂಗಪ್ಪ ಕಾರ್ಯಕ್ರಮ ನಿರೂಪಿಸಿದರು. ಮುತ್ತೇಗೌಡ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT