ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿಗೆ ತೆರಳಿದ ಆಶಾ ಕಾರ್ಯಕರ್ತೆಯರು

Last Updated 10 ಫೆಬ್ರುವರಿ 2011, 7:05 IST
ಅಕ್ಷರ ಗಾತ್ರ

ದಾವಣಗೆರೆ: ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಹಾಗೂ ಇತರ ಕಾರ್ಮಿಕರು ಫೆ. 10ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ಬಹಿರಂಗ ಸಭೆಯಲ್ಲಿ ಭಾಗವಹಿಸಲು ಬುಧವಾರ ನಗರದಿಂದ ರೈಲುಗಳಲ್ಲಿ ತೆರಳಿದರು.

ಆಶಾ ಕಾರ್ಯಕರ್ತೆಯರಿಗೆ  ್ಙ 3,000 ಅಂಗನವಾಡಿ ಕಾರ್ಯಕರ್ತೆಯರಿಗೆ ್ಙ 6ಸಾವಿರ ವೇತನ ಹಾಗೂ ಪಿಂಚಣಿ ನೀಡಬೇಕು. ಮನೆಕೆಲಸದವರಿಗೆ ಸಾಮಾಜಿಕ ಭದ್ರತೆ ಹಾಗೂ ನ್ಯಾಯ ಒದಗಿಸಬೇಕು ಎಂಬುದೂ ಸೇರಿದಂತೆ ಹಲವಾರು ಬೇಡಿಕೆಗಳನ್ನು ಇಟ್ಟು ಬೆಂಗಳೂರಿನಲ್ಲಿ ಸಭೆ ನಡೆಸಲಾಗುತ್ತಿದೆ. ಬಜೆಟ್ ಹಿನ್ನೆಲೆಯಲ್ಲಿ ತಮ್ಮ ಧ್ವನಿ ರಾಜ್ಯ ಸರ್ಕಾರಕ್ಕೂ ಮುಟ್ಟಬೇಕು ಎಂಬ ಉದ್ದೇಶದಿಂದ ಸಭೆ ಹಮ್ಮಿಕೊಳ್ಳಲಾಗಿದೆ. ಅಲ್ಲಿ ಮುಖ್ಯಮಂತ್ರಿಗೆ ಮನವಿ ಅರ್ಪಿಸಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆಯರ ಫೆಡರೇಷನ್ ಸಂಚಾಲಕ ಆವರಗೆರೆ ವಾಸು ತಿಳಿಸಿದರು.

ಬೆಂಗಳೂರಿನ ಸ್ವತಂತ್ರ ಉದ್ಯಾನದಲ್ಲಿ ಸಭೆ ನಡೆಯಲಿದೆ. ರಾಜ್ಯದ ವಿವಿಧ ಮೂಲೆಗಳಿಂದ ಕಾರ್ಮಿಕರು ಆಗಮಿಸಲಿದ್ದಾರೆ. ಜಿಲ್ಲೆಯಿಂದ  ವಿವಿಧ ಕ್ಷೇತ್ರಗಳ 4,000 ಮಂದಿ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಮಧ್ಯಾಹ್ನ ಹಾಗೂ ರಾತ್ರಿಯ ರೈಲುಗಳಲ್ಲಿ ಕಾರ್ಮಿಕರು ಬೆಂಗಳೂರಿಗೆ ತೆರಳಿದರು. ಐರಣಿ ಚಂದ್ರು, ಚಮನ್ ಸಾಬ್ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT