ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಬಾಂಬ್‌ಸ್ಪೋಟ: ಮದನಿ ಜಾಮೀನು ಅರ್ಜಿ ವಜಾ

Last Updated 3 ಜನವರಿ 2012, 9:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): 2008ರಲ್ಲಿ ಬೆಂಗಳೂರಿನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಪಿಪಲ್ಸ್ ಡೆಮಕ್ರಟಿಕ್ ಪಾರ್ಟಿ ಅಧ್ಯಕ್ಷ ಅಬ್ದುಲ್ ನಾಜೀರ್ ಮದಾನಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರಿಂ ಕೋರ್ಟ್ ಮಂಗಳವಾರ ವಜಾ ಮಾಡಿದೆ.

~ಈ ಪ್ರಕರಣದಲ್ಲಿ ಜಾಮೀನು ನೀಡಿ ಅವರನ್ನು ಬಂಧನದಿಂದ ಮುಕ್ತಿಗೊಳಿಸುವಲ್ಲಿ ನ್ಯಾಯಾಲಯಕ್ಕೆ ಆಸಕ್ತಿಯಿಲ್ಲ~ ಎಂದು ನ್ಯಾಯಪೀಠದ ಮುಖ್ಯ ನ್ಯಾಯಮೂರ್ತಿ ಪಿ. ಸದಾಶಿವಂ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

~ತಮಗೆ ಚಿಕಿತ್ಸೆಯ ಅವಶ್ಯಕತೆಯಿದ್ದು, ಕೇರಳದಲ್ಲಿ ಚಿಕಿತ್ಸೆ ಪಡೆಯಬೇಕಾಗಿದೆ. ಅದಕ್ಕೆ ಅನುಕೂಲ ಕಲ್ಪಿಸಬೇಕು~ ಎಂದು ಮದನಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಆ ಮನವಿಯನ್ನೂ ತಿರಸ್ಕರಿಸಿದ ನ್ಯಾಯಾಲಯ, ಮದನಿ ಅವರಿಗೆ ಅಗತ್ಯವಿರುವ ಸೂಕ್ತ ಚಿಕಿತ್ಸೆ ಒದಗಿಸಬೇಕೆಂದು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಬೆಂಗಳೂರಿನಲ್ಲಿ ನಡೆದ ಸರಣಿ ಬಾಂಬ್ ಸ್ಪೋಟದಲ್ಲಿ ಮದನಿ ಪ್ರಮುಖ ಪಾತ್ರವಹಿಸಿರುವರೆಂಬ ಆರೋಪದ ಮೇಲೆ 2010ರ ಅಗಸ್ಟ್ 17ರಂದು  ಅವರನ್ನ ಬಂಧಿಸಲಾಗಿತ್ತು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT