ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿವಿ ಕುಲಪತಿ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

Last Updated 7 ಜುಲೈ 2012, 19:50 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಮಸ್ಯೆಗಳನ್ನು ನಿವಾರಿಸಲು ಸೋತಿರುವ ಕುಲಪತಿ ಡಾ.ಎನ್.ಪ್ರಭುದೇವ್ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಸಂಘಟನೆಯ ರಾಜ್ಯ ಘಟಕದ ಕಾರ್ಯದರ್ಶಿ ಪುಷ್ಪಾಂಜಲಿ ಮಾತನಾಡಿ, `ವಿ.ವಿಯಲ್ಲಿರುವ ಸಮಸ್ಯೆ ನಿವಾರಿಸಲು ಸೋತಿರುವ ಕುಲಪತಿ ಪ್ರಭುದೇವ್ ಅವರ ಅಗತ್ಯ ವಿವಿಗಿಲ್ಲ. ಅವರನ್ನು ಸೇವೆಯಿಂದ ವಜಾ ಮಾಡುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಐದಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ರಾಜ್ಯಪಾಲರು ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಷಯವಾಗಿ ಜೂ 19ರಂದು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಒಂದು ವಾರದೊಳಗೆ ಸಮಸ್ಯೆಯನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ~ ಎಂದರು.

`ಕಳೆದ ಎರಡು ವರ್ಷಗಳಿಂದ ವಿವಿ ಲೆಕ್ಕ ಪರಿಶೋಧನೆ ಮಾಡಿಸಿಲ್ಲ. ಅಲ್ಲದೇ 6 ತಿಂಗಳಿಂದ ಸಿಂಡಿಕೇಟ್ ಸಭೆಯನ್ನು ಸಹ ಕರೆದಿಲ್ಲ. ಎಂಟು ತಿಂಗಳಿಂದ ಜ್ಞಾನಭಾರತಿ ಆವರಣಕ್ಕೆ ಕುಲಪತಿಯವರು ಭೇಟಿ ನೀಡಿಲ್ಲ. ಪರೀಕ್ಷಾಂಗ ವಿಭಾಗದಲ್ಲಿ ಅಕ್ರಮಗಳು ನಡೆಯುತ್ತಿವೆ. ಅಗತ್ಯಕ್ಕಿಂತ ಹೆಚ್ಚು ಉತ್ತರ ಪತ್ರಿಕೆಗಳನ್ನು ಮುದ್ರಿಸುತ್ತಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ~ ಎಂದರು.

`ವಿ.ವಿ. ವಿದ್ಯಾರ್ಥಿ ನಿಲಯಗಳಲ್ಲಿ ಮೂಲ ಸೌಕರ್ಯಗಳು ಇಲ್ಲ. ಜ್ಞಾನಭಾರತಿ ಆವರಣದಲ್ಲಿ ಅಗತ್ಯವಿರುವ ಮೂಲ ಸೌಕರ್ಯಗಳ ಬಗ್ಗೆ ಕುಲಪತಿಗಳಿಗೆ ಕಾಳಜಿಯೇ ಇಲ್ಲ. ಹೀಗಾಗಿ ಸರ್ಕಾರ ಕೂಡಲೇ ಕುಲಪತಿ ಪ್ರಭುದೇವ್ ಅವರನ್ನು ಸೇವೆಯಿಂದ ವಜಾಗೊಳಿಸಬೇಕು~ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT