ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಸ್ಫೋಟದಲ್ಲಿಅಲ್- ಉಮ್ಮಾ ಕೈವಾಡ?

Last Updated 24 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಚೆನ್ನೈ:ಬೆಂಗಳೂರು ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿಸಲಾಗಿರುವ ಮೂವರು ಆರೋಪಿಗಳು ನಿಷೇಧಿತ ಇಸ್ಲಾಮಿಕ್ ಸಂಘಟನೆ `ಅಲ್-ಉಮ್ಮಾ'ಗೆ ಸೇರಿದವರಾಗಿದ್ದು 1998ರ ಕೊಯಮತ್ತೂರು ಸರಣಿ ಸ್ಫೋಟ ಪ್ರಕರಣದಲ್ಲಿ ಜೈಲು ಶಿಕ್ಷೆ ಪೂರೈಸಿ ಬಿಡುಗಡೆಯಾದವರು ಎಂದು ತಮಿಳುನಾಡು ಪೊಲೀಸರು ತಿಳಿಸಿದ್ದಾರೆ.

ಕೊಯಮತ್ತೂರು ಸ್ಫೋಟ ಪ್ರಕರಣದಲ್ಲಿ `ಅಲ್-ಉಮ್ಮಾ' ಕೈವಾಡ ಪ್ರಮುಖವಾಗಿದ್ದು ಇದೇ ಸಂಘಟನೆ ಬೆಂಗಳೂರು ಸ್ಫೋಟಕ್ಕೂ ಸಂಚು ರೂಪಿಸಿತ್ತೆ ಎಂಬುದನ್ನು ಗಂಭೀರವಾಗಿ ತನಿಖೆ ಮಾಡಲಾಗುತ್ತಿದೆ.

`ಅಲ್- ಉಮ್ಮಾ' ಕಾರ್ಯಕರ್ತ ಕಿಚನ್ ಬುಹಾರಿ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದು ಇದನ್ನು ಪ್ರಶ್ನಿಸಿ ಆತನ ಪತ್ನಿ ಜಮೀಲಾ ಬಾನು ಮದುರೆನಲ್ಲಿರುವ ಮದ್ರಾಸ್ ಹೈಕೋರ್ಟ್ ಪೀಠದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾಳೆ.

ಮತ್ತೆ ಬಂಧನ ಇಲ್ಲ: ಕೊಯಮತ್ತೂರು ಸ್ಫೋಟ ಪ್ರಕರಣದಲ್ಲಿ  45ಕ್ಕೂ ಹೆಚ್ಚು ಜನರು ತಮ್ಮ ಶಿಕ್ಷೆ ಅವಧಿ ಪೂರೈಸಿ ಚೆನ್ನೈ ಅಕ್ಕ-ಪಕ್ಕ ವಾಸಿಸುತ್ತಿದ್ದು, ಇವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT