ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಟ್ಟಹಲಸೂರು ಶಾಲೆಯಲ್ಲಿ ಸೈಕಲ್ ವಿತರಣೆ

Last Updated 4 ಅಕ್ಟೋಬರ್ 2011, 19:20 IST
ಅಕ್ಷರ ಗಾತ್ರ

ಯಲಹಂಕ:  ಶಿಕ್ಷಕರು, ಪೋಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಿದರೆ ಮಕ್ಕಳ ಶೈಕ್ಷಣಿಕ ಗುಣಮಟ್ಟ ಸುಧಾರಿಸುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಅಶೋಕನ್ ಸಲಹೆ ನೀಡಿದರು.

ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಬೆಟ್ಟಹಲಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸರ್ಕಾರದಿಂದ ಮಂಜೂರಾಗಿದ್ದ ಸೈಕಲ್ ವಿತರಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಆಂಜಿನಪ್ಪ, ಉಪಾಧ್ಯಕ್ಷೆ ಸುಮಿತ್ರಾ ಶಿವರಾಜ್, ಮಾಜಿ ಅಧ್ಯಕ್ಷರಾದ ಬಿ.ಕೆ.ಮಂಜುನಾಥಗೌಡ, ನಾರಾಯಣಗೌಡ, ಅಭಿವೃದ್ಧಿ ಅಧಿಕಾರಿ ಮಮತಾ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮುನಿಕೃಷ್ಣಪ್ಪ, ಬೆಂಗಳೂರು ಹಾಲು ಒಕ್ಕೂಟದ ಮಾಜಿ ನಿರ್ದೇಶಕ ಟಿ.ಎಂ.ಶ್ರೀರಾಮ್, ಮುಖ್ಯ ಶಿಕ್ಷಕ ಗಂಗಾಧರಯ್ಯ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT