ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

Last Updated 10 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ನವೆಂಬರ್ ಕೊನೆ ವಾರ ಇಲ್ಲವೇ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬುಧವಾರ ಇಲ್ಲಿ ಹೇಳಿದರು.

ಕರ್ನಾಟಕ ಜ್ಞಾನ ಆಯೋಗ ಸಲ್ಲಿಸಿದ ಶಿಫಾರಸುಗಳನ್ನು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ನನ್ನ ಅಧಿಕಾರ ಅವಧಿಯಲ್ಲಿ ಸುವರ್ಣಸೌಧ ಉದ್ಘಾಟನೆ ಆಗುತ್ತಿದೆ. ಇದು ನನ್ನ ಸೌಭಾಗ್ಯ.  ಉತ್ತರ ಕರ್ನಾಟಕದ ಜನತೆಗೆ ಹೆಮ್ಮೆಯ ಸಂಗತಿ~ ಎಂದು ಹರ್ಷ ವ್ಯಕ್ತಪಡಿಸಿದರು.
 
`ಹಿಂದೆ ಸ್ಪೀಕರ್ ಆಗಿದ್ದಾಗ ನನ್ನ ಅಧ್ಯಕ್ಷತೆಯ ಸಮಿತಿ ಸುವರ್ಣಸೌಧಕ್ಕೆ ಜಾಗ ಗುರುತಿಸಿತು. ಉತ್ತರ ಕರ್ನಾಟಕ ಭಾಗದವರೇ ಮುಖ್ಯಮಂತ್ರಿ ಆಗಿರುವಾಗ ಸುವರ್ಣಸೌಧದ ಉದ್ಘಾಟನೆ ಆಗುತ್ತಿರುವುದು ಆ ಭಾಗದ ಜನರ ಖುಷಿಯನ್ನು ಇಮ್ಮಡಿಗೊಳಿಸಿದೆ~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT