ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ನಷ್ಟ: ಎಕರೆಗೆ 10 ಸಾವಿರ ಪರಿಹಾರಕ್ಕೆ ಆಗ್ರಹ

Last Updated 8 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಕೋಲಾರ: ಬರಗಾಲದಿಂದ ಬೆಳೆ ನಷ್ಟವಾಗಿರುವ ರೈತರ ಪ್ರತಿ ಎಕರೆಗೆ 10 ಸಾವಿರ ರೂಪಾಯಿ ಪರಿಹಾರ ಧನ ನೀಡಬೇಕು. ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಸೋಮವಾರ ಇಲ್ಲಿ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.

ಬೆಳೆ ನಷ್ಟದ ಸಮೀಕ್ಷೆಯನ್ನು ಶೀಘ್ರ ಆರಂಭಿಸಬೇಕು. ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಧನ ವಿತರಿಸಬೇಕು. ಜಿಲ್ಲೆಯ ಹಾಲು ಮತ್ತು ಇತರ ಸಹಕಾರ ಸಂಘಗಳ ಮೂಲಕ ಮೇವು ಸರಬರಾಜು ಮಾಡಬೇಕು ಎಂದು ಆಗ್ರಹಿಸಿದರು.

ಬರಗಾಲದ ಹಿನ್ನೆಲೆಯಲ್ಲಿ ಬಿಪಿಎಲ್, ಎಪಿಎಲ್ ಎಂಬ ತಾರತಮ್ಯ ಮಾಡದೆ ಎಲ್ಲ ಕುಟುಂಬಗಳಿಗೂ 35 ಕೆ.ಜಿ ಅಕ್ಕಿಯನ್ನು ರಿಯಾಯಿತಿ ದರದಲ್ಲಿ ನೀಡಬೇಕು. ವಿದ್ಯುತ್ ಬಿಲ್ ಮತ್ತು ಆಸ್ತಿ ಸಂಖ್ಯೆ ಹೊಂದಾಣಿಕೆ ಇಲ್ಲ ಎಂದು ಹೇಳಿ ನೈಜ ಪಡಿತರ ಚೀಟಿಗಳನ್ನು ರದ್ದು ಮಾಡಬಾರದು. ರೈತರ ಪಂಪ್‌ಸೆಟ್‌ಗಳಿಗೆ 8 ಗಂಟೆಕಾಲ ಮೂರು ಫೇಸ್ ಮತ್ತು 12 ಗಂಟೆ ಕಾಲ ಸಿಂಗಲ್ ಫೇಸ್ ವಿದ್ಯುತ್ ನೀಡಬೇಕು. ಜಿಲ್ಲೆಯಾದ್ಯಂತ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಉದ್ಯೋಗ ಖಾತ್ರಿ ಕೂಲಿಯನ್ನು 200 ರೂಪಾಯಿಗೆ ಹೆಚ್ಚಿಸಬೇಕು. ನಗರ ಪ್ರದೇಶಕ್ಕೂ ಯೋಜನೆಯನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದರು.

ಟಿ.ಎಂ.ವೆಂಕಟೇಶ್, ಸುಶೀಲಾ, ವಿ.ನಾರಾಯಣರೆಡ್ಡಿ, ಗಂಗಮ್ಮ, ಟಿ.ಕೃಷ್ಣೇಗೌಡ, ಎಸ್.ರಮೇಶ್, ಎನ್.ಎನ್.ಶ್ರೀರಾಂ, ವೆಂಕಟೇಶ್, ನಾರಾಯಣಸ್ವಾಮಿ, ಮುನಿಸ್ವಾಮಿ, ಕೆ.ಎಂ.ವೆಂಕಟೇಶ್, ಗೋವಿಂದಪ್ಪ, ಗೋಪಾಲ್, ಸುಬ್ರಮಣಿ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT