ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆಗಳಿಗೆ ಕಡ್ಡಾಯ ವಿಮೆ ಮಾಡಿಸಲು ಕರೆ

Last Updated 20 ಜೂನ್ 2011, 19:15 IST
ಅಕ್ಷರ ಗಾತ್ರ

ತಲಘಟ್ಟಪುರ:  `ರೈತರು ಎಲ್ಲ ಬೆಳೆಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಿಕೊಳ್ಳುವ ಮೂಲಕ ನಷ್ಟವುಂಟಾದಾಗ ಪರಿಹಾರ ಪಡೆದುಕೊಳ್ಳಲು ಪ್ರಯತ್ನಿಸಬೇಕು~ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಜಾಗೃತಿ ಸಮಿತಿ ಅಧ್ಯಕ್ಷ ಜಿ.ವಿಜಯಕುಮಾರ್ ಕರೆ ನೀಡಿದರು.

ಉತ್ತರಹಳ್ಳಿ ಹೋಬಳಿಯ ಉತ್ತರಿ ಗ್ರಾಮದಲ್ಲಿ ಕಂದಾಯ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಕೃತಿ ವಿಕೋಪದಿಂದ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರದ ಚೆಕ್ ವಿತರಿಸಿ ಅವರು ಮಾತನಾಡಿದರು.

`ತೋಟಗಾರಿಕೆ, ಹೈನುಗಾರಿಕೆ ಹಾಗೂ ವಾಣಿಜ್ಯ ಬೆಳೆಗಳಿಗೆ ಸರ್ಕಾರ ಹಲವು ರೀತಿಯ ಸವಲತ್ತುಗಳನ್ನು ನೀಡುತ್ತಿದ್ದು, ರೈತರು ಇದರ ಲಾಭ ಪಡೆದುಕೊಳ್ಳಲು ಮುಂದಾಗಬೇಕು. ಆ ಮೂಲಕ ಉತ್ತಮ ಫಸಲು ಬೆಳೆದು ನೆಮ್ಮದಿಯ ಜೀವನ ಕಂಡುಕೊಳ್ಳಬೇಕು~ ಎಂದು ಸಲಹೆ ನೀಡಿದರು.

ಬೆಂಗಳೂರು ದಕ್ಷಿಣ ತಾಲ್ಲೂಕು ಭೂ ಮಂಜೂರಾತಿ ಸಮಿತಿ ಅಧ್ಯಕ್ಷ ವೆಂಕಟಪ್ಪ ಮಾತನಾಡಿ, `ಸರ್ಕಾರ ರೈತರ ಕಷ್ಟಗಳನ್ನು ಅರಿತು ಶೇ. 1ರ ಬಡ್ಡಿ ದರದಲ್ಲಿ ಕೃಷಿಕರಿಗೆ ಸಾಲ ಸೌಲಭ್ಯ ನೀಡುತ್ತಿದೆ.

ಹೈನುಗಾರಿಕೆಯನ್ನು ಉತ್ತೇಜಿಸಲು ಲೀಟರ್ ಹಾಲಿಗೆ 2 ರೂಪಾಯಿ ಪ್ರೋತ್ಸಾಹ ನೀಡುವುದರ ಜತೆಗೆ ಆರೋಗ್ಯ ವಿಮೆಯನ್ನೂ ಜಾರಿಗೆ ತಂದಿದೆ. ಈ ಯೋಜನೆಯ ಲಾಭವನ್ನು ರೈತರು ಪಡೆದುಕೊಳ್ಳಬೇಕು~ ಎಂದರು.ಕಂದಾಯ ಅಧಿಕಾರಿ ಟಿ. ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT