ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ಳಟ್ಟಿ: ವಾಜಪೇಯಿ ಆರೋಗ್ಯ ತಪಾಸಣೆ

Last Updated 19 ಸೆಪ್ಟೆಂಬರ್ 2011, 6:35 IST
ಅಕ್ಷರ ಗಾತ್ರ

ಶಿರಹಟ್ಟಿ: `ಬಡ ಮತ್ತು ಮಧ್ಯಮ ವರ್ಗದವರು ದುಬಾರಿ ಆಸ್ಪತ್ರೆಗಳಲ್ಲಿ ಉಪಚರಿಸಿಕೊಳ್ಳುವದು ಸಾಧ್ಯವಾಗದ ಸಂಗತಿ. ಯಶಸ್ವಿನಿ ಮತ್ತು ಬಿಪಿಎಲ್ ಕಾರ್ಡ್‌ಗಳ ಮೂಲಕ ಸರ್ಕಾರದ ಯೋಜನೆಯನ್ನು ಸದುಪಯೋಗಪಡಿಸಿ ಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವಪ್ರಕಾಶ ಮಹಾಜ ನಶೆಟ್ಟರ ಸಲಹೆ ನೀಡಿದರು.  

ತಾಲ್ಲೂಕಿನ ಬೆಳ್ಳಟ್ಟಿ ಗ್ರಾಮದ ಎಪಿಎಂಸಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾ ಭೋವಿ ಸಮಾಜದ ಆಶ್ರಯದಲ್ಲಿ ಜರುಗಿದ ವಾಜಪೇಯಿ ಆರೋಗ್ಯಶ್ರೀ ಆರೋಗ್ಯ ತಪಾಸಣಾ ಉಚಿತ ಶಿಬಿರದಲ್ಲಿ ಅವರು ಮಾತನಾ ಡಿದರು.

ಆರೋಗ್ಯ ಹದೆಗೆಡದಂತೆ ಕಾಳಜಿ ವಹಿಸಬೇಕು. ದುಶ್ಚಟಗಳನ್ನು ತ್ಯಜಿಸಿ ಆರೋಗ್ಯ ಸಂರಕ್ಷಣೆಯತ್ತ ಗಮನ ಹರಿಸಬೇಕು. ಕಾಯಿಲೆಗಳು ಬರದಂತೆ ಮುನ್ನೆಚ್ಚರಿಕೆ ವಹಿಸುವದು ಅತ್ಯಗತ್ಯ ಎಂದು ಸಲಹೆ ನೀಡಿದರು.

ಗುಣಮಟ್ಟದ ಮತ್ತು ಉಚಿತ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸುತ್ತಿದ್ದು, ಹಿಂದುಳಿದ ವರ್ಗದವರು ಉನ್ನತ ಗುಣಮಟ್ಟದ ಚಿಕಿತ್ಸೆಯನ್ನು ಪಡೆಯಬಹುದಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ತಿಮ್ಮರಡ್ಡಿ ಅಳವಂಡಿ ಹೇಳಿದರು. 

ಸಂಘದ ಗೌರವಾಧ್ಯಕ್ಷ ರವಿ ಗುಂಜೇಕರ ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲ ಸಮಾಜಗಳಿಗಿಂತಲೂ ಭೋವಿ ಸಮಾಜ ಅತ್ಯಂತ ಹಿಂದುಳಿದಿದ್ದು, ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಶೈಕ್ಷಣಿಕ ಮತ್ತು ಆರ್ಥಿಕವಾಗಿ ದುರ್ಬಲವಾಗಿರುವ ಸಮಾಜದ ಅಭಿವೃದ್ಧಿಗೆ ಯುವಜನತೆ ಶ್ರಮಿಸಬೇಕು. ಸರ್ಕಾರದ ಯೋಜನೆ ಗಳನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.      

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಂಮಗಲಾ ಹಲಗಲಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಕಮಲಮ್ಮ ಸಜ್ಜನರ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಿವನಗೌಡ ಕಂಠಿಗೌಡರ, ಸದಸ್ಯ ತಿಮ್ಮರೆಡ್ಡಿ ಅಳವಂಡಿ, ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ಎಚ್.ವೈ. ಸಂದಕದ, ಗ್ರಾಮ ಪಂಚಾಯಿತಿ ಸದಸ್ಯರಾದ ತಿಮ್ಮರೆಡ್ಡಿ ಮರಡ್ಡಿ, ಮೋಹನ ಗುತ್ತೆಮ್ಮನವರ, ಕೊಟ್ರೇಶ ಸಜ್ಜನ, ರಾಜೇಂದ್ರ ಹಲಗಲಿ, ಹನುಮಂತಪ್ಪ ಬಂಡಿವಡ್ಡರ, ಗುರಪ್ಪ ವಡ್ಡರ, ಡಾ. ರವಿ ಮತ್ತಿತರರು ಹಾಜರಿದ್ದರು. ಬಸವರಾಜ ಬಳ್ಳಾರಿ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT