ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಬೇಂದ್ರೆ ಕಾವ್ಯ ವ್ಯಕ್ತಿತ್ವ ವಿಕಸನಕ್ಕೆ ಪೂರಕ'

Last Updated 4 ಏಪ್ರಿಲ್ 2013, 6:27 IST
ಅಕ್ಷರ ಗಾತ್ರ

ಬೀದರ್: ಬೇಂದ್ರೆ ಅವರ ಕಾವ್ಯಗಳು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ ಎಂದು ಬೆಂಗಳೂರಿನ ಸಾಹಿತಿ ಡಾ. ಜಿ. ಕೃಷ್ಣಪ್ಪ ಅಭಿಪ್ರಾಯಪಟ್ಟರು.
ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ ಬಳಿ ಇರುವ ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಸ್ನಾತಕೋತ್ತರ ಕೇಂದ್ರದಲ್ಲಿ ಸೋಮವಾರ ನಡೆದ ದ.ರಾ. ಬೇಂದ್ರೆ ಕಾವ್ಯ ಚಿಂತನೆ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿರಿಯ ಸಾಹಿತಿ ಪಂಚಾಕ್ಷರಿ ಪುಣ್ಯಶೆಟ್ಟಿ,  ಕನ್ನಡ ಸಾಹಿತ್ಯ ಸಂಘದ ಜಿಲ್ಲಾ ಅಧ್ಯಕ್ಷ ಸುರೇಶ್ ಚನಶೆಟ್ಟಿ ಮಾತನಾಡಿದರು. ಕೇಂದ್ರದ ವಿಶೇಷಾಧಿಕಾರಿ ಡಾ. ರವೀಂದ್ರನಾಥ ಗಬಾಡಿ ಅಧ್ಯಕ್ಷತೆ ವಹಿಸಿದ್ದರು. ಡಾ. ಈಶ್ವರಯ್ಯ ಕೊಡಂಬಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಬಸವರಾಜ ಬಲ್ಲೂರು ಸ್ವಾಗತಿಸಿದರು. ಲುಂಬಿಣಿ ನಿರೂಪಿಸಿದರು. ಸಂಜು ವಂದಿಸಿದರು.
ಪರೀಕ್ಷೆಗೆ ಸಿದ್ಧರಾಗಲು ಕರೆ

ಬೀದರ್: ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉನ್ನತ ಹುದ್ದೆ ಪಡೆಯಬೇಕೆಂದರೆ ಸ್ಪರ್ಧಾತ್ಮಕ ಪರೀಕ್ಷೆಗಳು ಎದುರಿಸಲು ಪ್ರಯತ್ನಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಸಲಹೆ ನೀಡಿದರು. ನಗರದ ಬಿ.ವಿ. ಭೂಮರಡ್ಡಿ ಪದವಿ ಮಹಾವಿದ್ಯಾಲಯದಲ್ಲಿ ಬುಧವಾರ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಪ್ರೊ. ಅಶೋಕ ಡೊಂಗ್ರೆ, ಪ್ರಾಚಾರ್ಯ ಡಾ. ಸಿ.ಎಸ್. ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.
ಪ್ರೊ. ಎಸ್.ಆರ್. ರೆಡ್ಡಿ, ಪ್ರೊ. ಮಾಕಾ ಪ್ರಭು, ಪ್ರೊ. ಬಸವರಾಜ ಉಪಸ್ಥಿತರಿದ್ದರು. ಅಶ್ವಿನಿ ಸ್ವಾಗತಿಸಿದರು. ನಿಖಿಲ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT