ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆ

Last Updated 12 ಡಿಸೆಂಬರ್ 2013, 19:34 IST
ಅಕ್ಷರ ಗಾತ್ರ

ಬ್ಯಾಡಗಿ (ಹಾವೇರಿ ಜಿಲ್ಲೆ): ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ತಾಲ್ಲೂಕಿನ ಮೋಟೆಬೆನ್ನೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ 4 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮೂಲಕವೇ ಬೆಳೆವಿಮೆ ಪರಿಹಾರದ ಹಣ ವಿತರಿ ಸಬೇಕು, ಬಿ.ಟಿ ಹತ್ತಿ ಬೆಳೆದು ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕು ಮತ್ತು ಗೋವಿನಜೋಳ ಹಾಗೂ ಹತ್ತಿಗೆ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಕಾರ್ಯ ಕರ್ತರು   ಪ್ರತಿಭಟನೆ ನಡೆಸಿದರು.

ಬ್ಯಾಡಗಿ ಪಟ್ಟಣದ ಎಸ್‌ಜೆಜೆಎಂ ಪದವಿಪೂರ್ವ ಸರ್ಕಾರಿ ಕಾಲೇಜು ಬಳಿ ಸೇರಿದ ಸಾವಿರಾರು ರೈತರು  ಪ್ರತಿಭ ಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಮೋಟೆಬೆ ನ್ನೂರ ಗ್ರಾಮಕ್ಕೆ ತೆರಳಿ  ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT