ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಕೆಗೆ ವೈದ್ಯರ ಆಗ್ರಹ

Last Updated 21 ಡಿಸೆಂಬರ್ 2012, 6:57 IST
ಅಕ್ಷರ ಗಾತ್ರ

ಪಾಂಡವಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಾರ್ವಜನಿಕ ಅಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ಜಯರಾಮ್ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ಅರ್.ಲತಾ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂದೆ ಜಮಾಯಿಸಿದ ವೈದ್ಯರು ಹಾಗೂ ಸಿಬ್ಬಂದಿ ಮಿನಿ ವಿಧಾನಸೌಧದ ಕಡೆಗೆ ಸಾಗಿದರು. ನಂತರ ಉಪವಿಭಾಗಾಧಿಕಾರಿ ಆರ್.ಲತಾ ಅವರನ್ನು ಭೇಟಿ ಮಾಡಿದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಜಿಲ್ಲಾ ಆಸ್ಪತ್ರೆಗಳನ್ನು ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಹಿಂಪಡೆಯಬೇಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಖಾಸಗಿಯವರಿಗೆ ನೀಡುವುದನ್ನು ನಿಲ್ಲಿಸಿ ಈಗಾಗಲೇ ನೀಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹಿಂಪಡೆಯಬೇಕು.

ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡುವ ಕಾಯಿದೆಗೆ ಸೂಕ್ತ ಮಾರ್ಪಾಡುಗಳನ್ನು ಅನುಷ್ಠಾನಗೊಳಿಸುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯನ್ನು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಿಂದ ಹೊರತರುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ಡಿ.21ರಂದು ಸಾರ್ವಜನಿಕ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಉಪಾಧ್ಯಕ್ಷ ಡಾ.ಅರವಿಂದ್, ಡಾ.ಸಂಧ್ಯಾ, ತಾಲ್ಲೂಕು ಆರೋಗ್ಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ಸಿ.ಪಿ.ವಿಜಯಕುಮಾರ್, ನಿರ್ದೇಶಕ ಕೆ.ಜೆ.ಕೃಷ್ಣೇಗೌಡ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT