ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಕೆಗೆ ಶುಶ್ರೂಷಕರ ಒತ್ತಾಯ

Last Updated 3 ಫೆಬ್ರುವರಿ 2011, 5:30 IST
ಅಕ್ಷರ ಗಾತ್ರ

ಚಿತ್ರದುರ್ಗ: ಬಹುದಿನಗಳಿಂದ ನನೆಗುದಿಗೆ ಬಿದ್ದಿರುವ ಶುಶ್ರೂಷಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರದ ಗಮನಸೆಳೆಯಲು ಬುಧವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಪ್ರತ್ಯೇಕ ಶುಶ್ರೂಷ ವಿದ್ಯಾಲಯ ಹಾಗೂ ನಿರ್ದೇಶನಾಲಯ ಸ್ಥಾಪಿಸಬೇಕು. ರಾಜ್ಯದಲ್ಲಿರುವ ಸುಮಾರು 320 ಸರ್ಕಾರಿ ಆಸ್ಪತ್ರೆಗಳಿಗೆ 7 598 ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಬೇಕು. ಸರ್ಕಾರಿ ವಸತಿ ಗೃಹಗಳನ್ನು 24 ಗಂಟೆ ಸೇವೆ ಸಲ್ಲಿಸುತ್ತಿರುವ ಶುಶ್ರೂಷಕರಿಗೆ ಮೀಸಲಿಡುವಂತೆ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶುಶ್ರೂಷಕರು ಮನವಿ ಮಾಡಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರತ ಮಹಿಳಾ ಶುಶ್ರೂಷಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಮತ್ತು ಹಾಲಿ ಕರ್ತವ್ಯನಿರತ ಗುತ್ತಿಗೆ ಆಧಾರಿತ ಶುಶ್ರೂಷಕರನ್ನು ಕಾಯಂಗೊಳಿಸಬೇಕು. ಶುಶ್ರೂಷಕರಿಗೆ ಸಮವಸ್ತ್ರ ಮತ್ತು ರಾತ್ರಿ ಪಾಳೆ ಭತ್ಯೆಯನ್ನು ಹೆಚ್ಚಿಸಬೇಕು. ಪತ್ರಾಂಕಿತ ರಜಾ ದಿನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭತ್ಯೆಯನ್ನು 15 ದಿನಗಳಿಂದ 30 ದಿನಗಳಿಗೆ ಹೆಚ್ಚಿಸಬೇಕು. ಗಂಡಾಂತರ ಭತ್ಯೆಯನ್ನು ಹೆಚ್ಚಿಸಿ ಎಲ್ಲ ಆಸ್ಪತ್ರೆಗಳಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ಸೇವಾ ಮನೋಭಾವ ಗುರುತಿಸಿ ‘ವರ್ಷದ ಅತ್ಯುತ್ತಮ ಶುಶ್ರೂಷಕರ ಪ್ರಶಸ್ತಿಯನ್ನು ನೀಡಬೇಕು. ಸರ್ಕಾರಿ ಶುಶ್ರೂಷಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ್ಙ 1,000ಯಿಂದ ್ಙ 5000ಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ಈ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಫೆ. 21ರಂದು ರಾಜ್ಯಾದ್ಯಂತ ಕರ್ತವ್ಯಕ್ಕೆ ಗೈರು ಹಾಜರಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್ ಹಾಗೂ ಎಂ. ಶ್ರೀದೇವಿ, ಮಲ್ಲಣ್ಣ, ಮಮತಾ, ಅನಿತಾ, ಮೀನಾಕ್ಷಮ್ಮ, ಗಾಯತ್ರಿ, ಲೀಲಾವತಿ ಮತ್ತಿತರರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT