ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆಗಳ ಈಡೇರಿಕೆಗೆ ನಿರಂತರ ಹೋರಾಟ

Last Updated 30 ಅಕ್ಟೋಬರ್ 2011, 10:15 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ:  ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ, ಸಮರ್ಪಕ ವಿದ್ಯುತ್ ಪೂರೈಕೆ, ಜಲ ಸಂಪನ್ಮೂಲಗಳ ಸದ್ಬಳಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆ ವತಿಯಿಂದ ನಿರಂತರ ಹೋರಾಟ ನಡೆಸಲಾಗುವುದು ಎಂದು ಸಂಘಟನೆ ಕಾರ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರ ಶೇಖರ್ ತಿಳಿಸಿದರು.

`ನ್ಯಾಯಸಮ್ಮತ ಬೇಡಿಕೆಗಳು ಮತ್ತು ಹಕ್ಕುಗಳಿಗಾಗಿ ರೈತರು ದಶಕ ಗಳಿಂದ ಹೋರಾಟ ನಡೆಸುತ್ತಿದ್ದು, ಕೆಲವಾರು ಬೇಡಿಕೆಗಳು ಈಡೇರುತ್ತಿಲ್ಲ. ಬೇಡಿಕೆಗಳು ಈಡೇರುವವರೆಗೆ ನಿರಂತರ ಹೋರಾಟ, ಪ್ರತಿಭಟನೆ ನಡೆಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಲಾಗುವುದು~ ಎಂದು  ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

`ಮಳೆಯಿಲ್ಲದೇ ಈಗಾಗಲೇ ಕಂಗೆಟ್ಟಿ ರುವ ರೈತರು ವಿದ್ಯುತ್ ಅಸಮರ್ಪಕ ಪೂರೈಕೆಯಿಂದ ಇನ್ನಷ್ಟು ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ವಿದ್ಯುತ್ ಪೂರೈಕೆ ಯಿಲ್ಲದ ಕಾರಣ ಕೃಷಿ ಚಟುವಟಿಕೆಗೆ ಹಿನ್ನಡೆಯಾಗುತ್ತಿದೆ. ಕೊಳವೆಬಾವಿ ಯಿಂದ ನೀರು ಹರಿಸಲು ಸಾಧ್ಯವಾಗು ತ್ತಿಲ್ಲ. ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲು ಆಗುತ್ತಿಲ್ಲ~ ಎಂದು ಅವರು ತಿಳಿಸಿದರು.

`ವಿದ್ಯುತ್ ಕ್ಷಾಮ ತಲೆದೋರುತ್ತದೆ ಎಂಬ ಅಂಶವನ್ನು ಅರಿತಿದ್ದ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಬೇಕಿತ್ತು. ಇಲ್ಲಸಲ್ಲದ ನೆಪಗಳನ್ನು ಹೇಳುವ ಬದಲು ಕಲ್ಲಿದ್ದಲ್ಲು ಗಳನ್ನು ಶೇಖರಣೆ ಮಾಡಿಕೊಳ್ಳ ಬೇಕಿತ್ತು. ವಿದ್ಯುತ್ ಉತ್ಪಾದನೆ ಮತ್ತು ಉಳಿತಾಯಕ್ಕೆ ಸರ್ಕಾರ ಪರ್ಯಾಯ ಮಾರ್ಗ ಕಂಡುಕೊಳ್ಳಬೇಕಿತ್ತು~ ಎಂದು ಅವರು ಹೇಳಿದರು.

`ಸರ್ಕಾರ ಮತ್ತು ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ರೈತರ ಸಮಸ್ಯೆ ಬಗೆಹರಿಯುತ್ತಿಲ್ಲ. ಭರವಸೆ ನೀಡುವುದರಲ್ಲೇ ಜನಪ್ರತಿನಿಧಿ ಗಳು ಕಾಲ ದೂಡುತ್ತಿದ್ದಾರೆ ಹೊರತು ಸಮಸ್ಯೆಗಳು ಬಗೆಹರಿಸಲು ಮುಂದಾ ಗುತ್ತಿಲ್ಲ. ಶಾಶ್ವತ ನೀರಾವರಿ ಯೋಜನೆ ಅನುಷ್ಠಾನ ಮತ್ತು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನಿರ್ಲಕ್ಷ್ಯ ತೋರಲಾ ಗುತ್ತಿದೆ~ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT