ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋಜೇಗೌಡ ಜೆಡಿಎಸ್ ಅಭ್ಯರ್ಥಿ?

Last Updated 24 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಎಸ್.ಎಲ್.ಬೋಜೇಗೌಡ ಅವರನ್ನು ಕಣಕ್ಕೆ ಇಳಿಸುವುದು ಬಹುತೇಕ ಖಚಿತವಾಗಿದೆ.

ಪಕ್ಷದ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಹೆಸರನ್ನು ಅಂತಿಮಗೊಳಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಈ ಕುರಿತು ಚರ್ಚಿಸಲು ಭಾನುವಾರ ಹೊಳೆನರಸೀಪುರದಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಪಕ್ಷದ ಪ್ರಮುಖರ ಸಭೆ ಕರೆಯಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಈ ಸಭೆಯಲ್ಲಿ ಹಾಜರಿದ್ದು, ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಿದ್ದಾರೆ ಎಂದು ಪಕ್ಷದ ವಕ್ತಾರ ವೈ.ಎಸ್. ವಿ.ದತ್ತ `ಪ್ರಜಾವಾಣಿ~ಗೆ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT