ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋಧಕ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆಗೆ ಯುಜಿಸಿ ಪ್ರಸ್ತಾವ

Last Updated 12 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗವು 12ನೇ ಪಂಚವಾರ್ಷಿಕ ಯೋಜನೆಯಡಿ, ಆಯ್ದ ವಿಶ್ವವಿದ್ಯಾಲಯಗಳಲ್ಲಿ ಕನಿಷ್ಠ 20 ಬೋಧಕ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವ ಮುಂದಿಟ್ಟಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ಗುಣಮಟ್ಟ ಸುಧಾರಣೆಗಾಗಿ ಸ್ಥಾಪನೆಯಾಗಲಿರುವ ಈ ಕೇಂದ್ರಗಳು ಶಿಸ್ತುಬದ್ಧ ಪುನಶ್ಚೇತನ ಕಾರ್ಯಕ್ರಮಗಳು, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು ಒಳಗೊಂಡ ಬೋಧನೆ- ಕಲಿಕೆ ಸಂಶೋಧನಾ ತರಬೇತಿಯನ್ನು ನೀಡಲಿವೆ.

ಮೂಲ ಸೌಕರ್ಯ, ಹಳೆಯ ದಾಖಲೆಗಳು ಹಾಗೂ ಶೈಕ್ಷಣಿಕ ಸಾಮರ್ಥ್ಯವನ್ನು ಪರಿಗಣಿಸಿ ಈ ಕೇಂದ್ರಗಳ ಸ್ಥಾಪನೆಗೆ ವಿಶ್ವವಿದ್ಯಾಲಯಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ಸಲ್ಲಿಸಿರುವ ಪ್ರಸ್ತಾವದಲ್ಲಿ ಹೇಳಿದೆ.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT