ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕಾಕ್ ಪ್ರವಾಹ: ಸಂಕಷ್ಟದಲ್ಲಿ ಜನತೆ

Last Updated 27 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬ್ಯಾಂಕಾಕ್ (ಎಪಿ): ಭಾರಿ ಪ್ರವಾಹದ ಕಾರಣ ಗುರುವಾರ ಸಾವಿರಾರು ಮಂದಿ ಬಸ್, ವಿಮಾನ, ರೈಲಿನ ಮೂಲಕ ರಾಜಧಾನಿಯಿಂದ ಸುರಕ್ಷಿತ ಸ್ಥಳಕ್ಕೆ ತೆರಳಿದರು. ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರವು ಐದು ದಿನಗಳ ವಿಶೇಷ ತುರ್ತು ರಜೆಯನ್ನು ಘೋಷಿಸಿದ್ದು, ಪ್ರವಾಹ ಪೀಡಿತ ಸ್ಥಳದಿಂದ ಜನರನ್ನು ತೆರವುಗೊಳಿಸುವ ಕಾರ್ಯ ಭರದಿಂದ ಸಾಗುತ್ತಿದೆ.

ಬ್ಯಾಂಕಾಕ್‌ನ 50 ಜಿಲ್ಲೆಗಳಲ್ಲಿ ಕೇವಲ ಎರಡು ಜಿಲ್ಲೆಗಳಿಗೆ ಮಾತ್ರವೇ ತೆರವುಕಾರ್ಯಕ್ಕೆ ಸಂಬಂಧಿಸಿದಂತೆ ಎಚ್ಚರಿಕೆ ನೀಡಲಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಇಡೀ ನಗರ ಜಲಾವೃತಗೊಳ್ಳುವ ಸಾಧ್ಯತೆ ಇದೆ ಎಂದು ಸರ್ಕಾರ ಮುನ್ನೆಚ್ಚರಿಕೆ ನೀಡಿದೆ.

ಜುಲೈನಿಂದ ಕಾಣಿಸಿಕೊಂಡಿರುವ ಪ್ರವಾಹಕ್ಕೆ ಈತನಕ ಸುಮಾರು 373 ಮಂದಿ ಸಾವನ್ನಪ್ಪಿದ್ದು, ಕೋಟಿಗಟ್ಟಲೆ ನಷ್ಟ ಉಂಟಾಗಿದೆ. ಕಳೆದು ಎರಡು ದಿನಗಳ ಹಿಂದೆ ನಗರದ ಎರಡನೇ ಅತಿ ದೊಡ್ಡ ವಿಮಾನ ನಿಲ್ದಾಣಕ್ಕೂ ಪ್ರವಾಹದ ನೀರು ನುಗ್ಗಿದ್ದು, ವಿಮಾನ ಸಂಚಾರಕ್ಕೆ ಅಡ್ಡಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT