ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕಿನಲ್ಲಿ ಕಳವು: ತನಿಖೆ ಚುರುಕು

Last Updated 14 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಆಳಂದ (ಗುಲ್ಬರ್ಗ): ತಾಲ್ಲೂಕಿನ ಕಡೆಗಂಚಿ ಭಾರತೀಯ ಸ್ಟೇಟ್ ಬ್ಯಾಂಕ್  ಶಾಖೆಯಲ್ಲಿ ಶುಕ್ರವಾರ ರಾತ್ರಿ ನಡೆದ  1.50 ಕೋಟಿ ರೂಪಾಯಿ ಮೌಲ್ಯದ ನಗನಾಣ್ಯ ಕಳವು ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.

ಕಳ್ಳರ ಪತ್ತೆಗಾಗಿ ಪೊಲೀಸರ ಎರಡು ತಂಡಗಳನ್ನು ರಚಿಸಲಾಗಿದೆ. ಅಂತರರಾಜ್ಯ ಕಳ್ಳರು ಈ ಕೃತ್ಯ ಎಸಗಿರುವ ಶಂಕೆ ಇರುವುದರಿಂದ ನರೋಣಾ ಪಿಎಸ್‌ಐ ವಿನಾಯಕ ನಾಯಕ ನೇತೃತ್ವದ ತಂಡವು ಭಾನುವಾರ ನೆರೆಯ ಮಹಾರಾಷ್ಟ್ರದ ಸೊಲ್ಲಾಪುರ, ಉಮರ್ಗಾ ಪಟ್ಟಣಗಳಿಗೆ ತೆರಳಿತು. ಸರ್ಕಲ್ ಇನ್‌ಸ್ಪೆಕ್ಟರ್ ಜಿ.ಎಸ್.ಉಡುಗಿ ನೇತೃತ್ವದ ಇನ್ನೊಂದು ತಂಡವು ರಾಜ್ಯದ ಗುಲ್ಬರ್ಗ, ಯಾದಗಿರಿ ಮತ್ತಿತರ ಪಟ್ಟಣಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ ಎಂದು ಡಿವೈಎಸ್‌ಪಿ ಎಸ್.ಬಿ. ಸಾಂಬಾ `ಪ್ರಜಾವಾಣಿ~ಗೆ ತಿಳಿಸಿದರು.

`ಕಲಾವಿದರ ಮಾಸಾಶನ ಹೆಚ್ಚಳ ಉದ್ದೇಶ~
ಬಾಗಲಕೋಟೆ:
ಕಲಾವಿದರಿಗೆ ಈಗ ನೀಡುತ್ತಿರುವ ರೂ 1000  ಮಾಸಾಶನವನ್ನು ಮುಂದಿನ ವರ್ಷದಿಂದ 2000 ರೂ.ಗಳಿಗೆ ಹೆಚ್ಚಿಸುವ ಉದ್ದೇಶವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ ಭರವಸೆ ನೀಡಿದರು.

ನವನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಭಾನುವಾರ ನಡೆದ ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಜಾನಪದ ಕಲಾಮೇಳ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಇಲಾಖೆ ವ್ಯಾಪ್ತಿಯಲ್ಲಿ ಇರುವ 12 ವಿವಿಧ ಅಕಾಡೆಮಿಗಳಿಗೆ ಬಜೆಟ್‌ನಲ್ಲಿ ತಲಾ ರೂ. 50 ಲಕ್ಷ ಅನುದಾನ ನೀಡಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT