ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್: ಶೇ 10ರಷ್ಟು ಪ್ರಗತಿ

Last Updated 16 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಪ್ರಸಕ್ತ ಹಣಕಾಸು ವರ್ಷದ ಎರಡನೆಯ ತ್ರೈಮಾಸಿಕ ಅವಧಿಯಲ್ಲಿ ಬ್ಯಾಂಕುಗಳ ಸರಾಸರಿ ಹಣಕಾಸು ಸಾಧನೆ ಶೇ 10ರಷ್ಟು ಪ್ರಗತಿ ದಾಖಲಿಸಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಆದರೆ, ಖಾಸಗಿ ಬ್ಯಾಂಕುಗಳಿಗೆ ಹೋಲಿಸಿದರೆ, ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಪ್ರಗತಿ ಕಡಿಮೆ ಇರಲಿದೆ. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು `ವಸೂಲಾಗದ ಸಾಲದ (ಎನ್‌ಪಿಎ) ದತ್ತಾಂಶ ನಿರ್ವಹಣೆಗಾಗಿ ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿದ್ದು, ಇದಕ್ಕೆ ಹೆಚ್ಚಿನ ಹಣ ಮೀಸಲಿಡಲಾಗಿದೆ. ಇದರಿಂದ ಲಾಭ ಪ್ರಮಾಣದ ಕುಸಿಯಲಿದೆ ಎಂದು ಕೊಟಕ್ ಇಕ್ವಿಟಿಸ್‌ನ ಮುಖ್ಯಸ್ಥ ಶೇರ್‌ಖಾನ್ ಅಭಿಪ್ರಾಯಪಟ್ಟಿದ್ದಾರೆ.

ಎರಡನೆಯ ತ್ರೈಮಾಸಿಕ ಅವಧಿಯಲ್ಲಿ ಮಧ್ಯಮ ಖಾಸಗಿ ಬ್ಯಾಂಕುಗಳು ಶೇ 27ರಷ್ಟು ಮತ್ತು ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಶೇ 3ರಷ್ಟು ಪ್ರಗತಿ ದಾಖಲಿಸಿವೆ. `ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕಳೆದ ಮಾರ್ಚ್ 2010ರಿಂದ ಇಲ್ಲಿಯವರೆಗೆ 12 ಬಾರಿ ಅಲ್ಪಾವಧಿ ಬಡ್ಡಿ ದರಗಳನ್ನು ಹೆಚ್ಚಿಸಿದೆ. ಇದರಿಂದ ಸಾಲದ ಬೇಡಿಕೆ ತಗ್ಗಿದೆ. ಆದರೆ, ಇದು ಬ್ಯಾಂಕುಗಳ ನಿವ್ವಳ ಬಡ್ಡಿ ಲಾಭದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT