ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡ್ಮಿಂಟನ್: ಎರಡನೇ ಸುತ್ತಿಗೆ ಸೈನಾ

Last Updated 4 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಭಾರತದ ಸೈನಾ ನೆಹ್ವಾಲ್ ಸೋಲ್‌ನಲ್ಲಿ ನಡೆಯುತ್ತಿರುವ ಕೊರಿಯಾ ಓಪನ್ ಸೂಪರ್ ಸರಣಿ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ವಿಭಾಗದ ಸಿಂಗಲ್ಸ್‌ನಲ್ಲಿ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.

ಬುಧವಾರ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ನಾಲ್ಕನೇ ಶ್ರೇಯಾಂಕಿತೆ ಸೈನಾ 21-5, 21-6ರಲ್ಲಿ ಸ್ಕಾಟ್ ಸೂಸನ್ ಅವರನ್ನು ಮಣಿಸಿದರು. ಈ ಹೋರಾಟ ಕೇವಲ 24 ನಿಮಿಷಗಳಲ್ಲಿ ಅಂತ್ಯ ಕಂಡಿತು.

ಡಬಲ್ಸ್ ವಿಭಾಗದಲ್ಲಿ ಭಾರತದ ಜ್ವಾಲಾ ಗುಟ್ಟಾ ಹಾಗೂ ಕರ್ನಾಟಕದ ಅಶ್ವಿನಿ ಪೊನ್ನಪ್ಪ ಜೋಡಿ 21-19, 21-18ರಲ್ಲಿ ಮಲೇಷ್ಯಾದ ವಿವಿಯನ್ ಕಾಹ ಮೂನ್ ಹೂ-ಕೇ ವೊಯಿ ವೂನ್ ಎದುರು ಗೆಲುವು ಪಡೆದು ಶುಭಾರಂಭ ಮಾಡಿತು.  ಮಿಶ್ರ ಡಬಲ್ಸ್‌ನಲ್ಲಿ ಜ್ವಾಲಾ ಹಾಗೂ ವಿ. ದಿಜು ಜೋಡಿ ಮೊದಲ ಸುತ್ತಿನ ಪಂದ್ಯದಲ್ಲಿ 21-18, 21-18ರಲ್ಲಿ ಮಲೇಷ್ಯಾದ ಪೆಂಗ್ ಸೂನ್    ಚಾನ್-ಲೂಯಿ ಯಿಂಗ್ ಗೊಹ್ ಅವರನ್ನು ಮಣಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT