ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡ್ಮಿಂಟನ್: ಸೈನಾ ಪರಾಭವ

Last Updated 6 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತದ ಸೈನಾ ನೆಹ್ವಾಲ್ ಸೋಲ್‌ನಲ್ಲಿ ನಡೆಯುತ್ತಿರುವ ಕೊರಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ವಿಭಾಗದ ಸಿಂಗಲ್ಸ್‌ನ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಸೋಲು ಕಂಡರು.

ಶುಕ್ರವಾರ ನಡೆದ ಪಂದ್ಯದಲ್ಲಿ ಸೈನಾ 17-21, 10-21ರಲ್ಲಿ ಚೀನಾದ ಆರನೇ ಶ್ರೇಯಾಂಕದ ಎಂಜಿಯೊ ಜೇಯಿಂಗ್ ಎದುರು ಸೋಲು ಅನುಭವಿಸಿದರು. ಈ ಹೋರಾಟ ಕೇವಲ 26 ನಿಮಿಷಗಳಲ್ಲಿ ಅಂತ್ಯ ಕಂಡಿತು.
 ಹೈದರಾಬಾದ್‌ನ ಆಟಗಾರ್ತಿ ಮೊದಲ ಗೇಮ್‌ನಲ್ಲಿ 5-1ರಲ್ಲಿ ಮುನ್ನಡೆಯಲ್ಲಿದ್ದರು.

ಈ ವೇಳೆ ಅತ್ಯುತ್ತಮ ಸ್ಮಾಷ್‌ಗಳನ್ನು ಸಿಡಿಸಿದ ಚೀನಾದ ಆಟಗಾರ್ತಿ 8-8ರಲ್ಲಿ ಸಮಬಲ ಸಾಧಿಸಿದರು. ನಂತರ ಈ ಮುನ್ನಡೆಯನ್ನು 14-10ಕ್ಕೆ ಹೆಚ್ಚಿಸಿಕೊಂಡರು. ಈ ಹಂತದಲ್ಲಿ ಸೈನಾಗೆ ಜೇಯಿಂಗ್ ಎದುರು ತಕ್ಕ ಪ್ರತಿರೋಧ ತೋರಲು ಸಾಧ್ಯವಾಗಲಿಲ್ಲ.

ಎರಡನೇ ಗೇಮ್‌ನಲ್ಲಿ ನಾಲ್ಕನೇ ಶ್ರೇಯಾಂಕದ ಭಾರತದ ಆಟಗಾರ್ತಿ 7-6ರಲ್ಲಿ ಮುನ್ನಡೆಯನ್ನು ಗಳಿಸಿದ್ದರು. ಸತತ ಆರು ಪಾಯಿಂಟ್‌ಗಳನ್ನು ಕಲೆ ಹಾಕಿದ ಜೇಯಿಂಗ್ ಗೆಲುವು ಸಾಧಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟರು.

ಈ ಪಂದ್ಯದಲ್ಲಿ ಸೋಲು ಅನುಭವಿಸುವ ಮೂಲಕ ಸೈನಾ ತಮ್ಮ ಹೋರಾಟವನ್ನು ಅಂತ್ಯಗೊಳಿಸಿದರು. ಜನವರಿ 10ರಿಂದ ಆರಂಭವಾಗುವ ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಇವರು ಸ್ಪರ್ಧಿಸಲಿದ್ದಾರೆ.

ಮಿಶ್ರ ಡಬಲ್ಸ್‌ನಲ್ಲೂ ಸೋಲು: ಭಾರತದ ಜ್ವಾಲಾ ಗುಟ್ಟಾ ಹಾಗೂ ವಿ. ದಿಜು ಜೋಡಿ ಮಿಶ್ರ ಡಬಲ್ಸ್ ವಿಭಾಗದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಸೋಲು ಕಂಡಿತು. ಡೆನ್ಮಾರ್ಕ್‌ನ ಜೋಕಿಮ್ ಫಿಸ್ಚರ್ ನೆಲ್ಸನ್ ಹಾಗೂ ಕ್ರಿಸ್ಟಿನ್ನಾ ಪೆಡರ್ಸನ್ ಜೋಡಿ 21-19, 21-12ರಲ್ಲಿ ಭಾರತದ ಸ್ಪರ್ಧಿಗಳಿಗೆ ಸೋಲುಣಿಸಿ ಸೆಮಿಫೈನಲ್‌ಗೆ ಮುನ್ನಡೆಯಿತು. ಈ ಮೂಲಕ ಭಾರತದ ಸವಾಲು ಈ ಟೂರ್ನಿಯಲ್ಲಿ ಅಂತ್ಯ ಕಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT