ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಪ್ಟಿಸ್ಟ್ ಆಸ್ಪತ್ರೆ ಸಿಇಒಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Last Updated 2 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ನವದೆಹಲಿಯಲ್ಲಿ ಬುಧವಾರ ನಡೆದ ರಾಷ್ಟ್ರೀಯ ಪರೀಕ್ಷಾ ಮಂಡಳಿಯ 17ನೇ ಘಟಿಕೋತ್ಸವ ಸಮಾರಂಭದಲ್ಲಿ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಅಲೆಕ್ಸಾಂಡರ್ ಥಾಮಸ್ ಅವರು `ಉತ್ತಮ ಬೋಧಕ~ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದರು.

 ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
 `ಡಿಪ್ಲೊಮ್ಯಾಟ್ ನ್ಯಾಷನಲ್ ಬೋರ್ಡ್~ನ (ಡಿಎನ್‌ಬಿ) ಕೋರ್ಸ್‌ಗಳನ್ನು ಉತ್ತಮವಾಗಿ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಬ್ಯಾಪ್ಟಿಸ್ಟ್ ಆಸ್ಪತ್ರೆಯು `ಉತ್ತಮ ಬೋಧಕ~ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿತ್ತು.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಅಲೆಕ್ಸಾಂಡರ್ ಥಾಮಸ್, `ಆಸ್ಪತ್ರೆಯು ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಅಂಶಗಳನ್ನು ಗಮನಿಸಿ ಉತ್ತಮ ಬೋಧಕ ರಾಷ್ಟ್ರೀಯ ಪ್ರಶಸ್ತಿ ನೀಡಿರುವುದಕ್ಕೆ ಸಂತಸವಾಗಿದೆ~ ಎಂದು ಹೇಳಿದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಗುಲಾಂ ನಬಿ ಆಜಾದ್ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT