ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಸ್ಕೆಟ್‌ಬಾಲ್: ಕನಕ ತಂಡಕ್ಕೆ ಜಯ

Last Updated 5 ಡಿಸೆಂಬರ್ 2012, 19:39 IST
ಅಕ್ಷರ ಗಾತ್ರ

ಶಿವಮೊಗ್ಗ: ಕೋಲಾರದ ಕನಕ ತಂಡ ಶಿವಮೊಗ್ಗ ಯೂತ್ಸ್ ಆಶ್ರಯದಲ್ಲಿ ಇಲ್ಲಿ ನಡೆಯುತ್ತಿರುವ ಅಸೋಸಿಯೇಷನ್ ಕಪ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನ ಬುಧವಾರದ ಪಂದ್ಯದಲ್ಲಿ 36-24 ಪಾಯಿಂಟ್‌ಗಳಿಂದ ಸಹಕಾರ ನಗರ ಬ್ಯಾಸ್ಕೆಟ್‌ಬಾಲ್ ಕ್ಲಬ್ ತಂಡವನ್ನು ಮಣಿಸಿತು.

ವಿಜಯಿ ತಂಡ ವಿರಾಮದ ವೇಳೆಗೆ 20-13ರಲ್ಲಿ ಮುನ್ನಡೆ ಸಾಧಿಸಿತ್ತು. ಕನಕ ತಂಡದ ಗುರುಪ್ರಸಾದ್ (13) ಪಾಯಿಂಟ್ ಗಳಿಸಿ ಗಮನ ಸೆಳೆದರು.

ದಿನದ ಇತರ ಪಂದ್ಯಗಳಲ್ಲಿ ಎಸ್‌ಬಿಐ 40-15ರಲ್ಲಿ ಬಾಷ್ ಮೇಲೂ, ಯಂಗ್ ಓರಿಯನ್ಸ್ 64-37ರಲ್ಲಿ ಶಿವಮೊಗ್ಗ ಯೂತ್ಸ್ ವಿರುದ್ಧವೂ, ಬೆಂಗಳೂರಿನ ಸ್ಪೋರ್ಟ್ಸ್ ಹಾಸ್ಟೆಲ್ 41-22ರಲ್ಲಿ ವಿಮನಾಪುರ ಸ್ಪೋರ್ಟ್ಸ್ ಕ್ಲಬ್ ಮೇಲೂ, ಧಾರವಾಡದ ರೋವರ್ಸ್ 35-28ರಲ್ಲಿ ಪಟ್ಟಾಭಿರಾಮನಗರ ಕ್ಲಬ್ ವಿರುದ್ಧವೂ ಜಯ ಸಾಧಿಸಿತು.ಮಹಿಳಾ ವಿಭಾಗದಲ್ಲಿ ಬೆಂಗಳೂರಿನ ಇಂದಿರಾನಗರ ಬ್ಯಾಸ್ಕೆಟ್‌ಬಾಲ್ ಕ್ಲಬ್ 40-16ರಲ್ಲಿ ಎನ್‌ಜಿವಿ ಕ್ಲಬ್ ತಂಡವನ್ನು ಸೋಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT