ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಸ್ಕೆಟ್‌ಬಾಲ್: ಕರ್ನಾಟಕ ತಂಡಕ್ಕೆ ಗೆಲುವು

Last Updated 18 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತಮ ಪ್ರದರ್ಶನ ಮುಂದುವರಿಸಿರುವ ಕರ್ನಾಟಕ ಬಾಲಕಿಯರ ತಂಡದವರು ಲಖನೌನಲ್ಲಿ ನಡೆಯುತ್ತಿರುವ 38ನೇ ಸಬ್ ಜೂನಿಯರ್ ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಎರಡನೇ ಗೆಲುವು ಪಡೆದರು.

ಭಾನುವಾರ ನಡೆದ ಪಂದ್ಯದಲ್ಲಿ ಬಾಲಕಿಯರ ತಂಡ 35-23ಪಾಯಿಂಟ್‌ಗಳಿಂದ ಮಧ್ಯ ಪ್ರದೇಶ ತಂಡವನ್ನು ಮಣಿಸಿತು. ಲೋಪಮುದ್ರ (20) ಹಾಗೂ ಸಂಧ್ಯಾ  (8) ಚುರುಕಿನ ಆಟವಾಡಿದರು. ಈ ತಂಡ ಮೊದಲ ಪಂದ್ಯದಲ್ಲಿ ಉತ್ತರ ಪ್ರದೇಶ ಎದುರು ಜಯ ಸಾಧಿಸಿತ್ತು.

ಬಾಲಕರ ತಂಡಕ್ಕೆಸೋಲು: ಇದೇ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ಬಾಲಕರ ತಂಡ 13-38 ಪಾಯಿಂಟ್‌ಗಳಿಂದ ಒಡಿಶಾ ತಂಡದ ಎದುರು ಸೋಲು ಕಂಡಿತು. ಈ ತಂಡದ ಮೊಹಾಂತಿ (15) ಪಾಯಿಂಟ್ ಗಳಿಸಿ ಗಮನ ಸೆಳೆದರು ಎಂದು ಇಲ್ಲಿಗೆ ಬಂದಿರುವ ವರದಿಗಳು ತಿಳಿಸಿವೆ. ಬಾಲಕರ ತಂಡ ತನ್ನ ಮೊದಲ ಪಂದ್ಯದಲ್ಲಿ ಜಾರ್ಖಂಡ್ ಎದುರು ಸೋಲು ಕಂಡಿದೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT