ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಸ್ಕೆಟ್‌ಬಾಲ್: ಕ್ವಾರ್ಟರ್ ಫೈನಲ್‌ಗೆ ಕರ್ನಾಟಕ

Last Updated 20 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತಮ ಪ್ರದರ್ಶನ ನೀಡುತ್ತಿರುವ ಕರ್ನಾಟಕ ಬಾಲಕಿಯರ ತಂಡದವರು ಲಖನೌನಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರೀಯ ಸಬ್ ಜೂನಿಯರ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ.

ಮಂಗಳವಾರ ನಡೆದ ಪಂದ್ಯದಲ್ಲಿ ಕರ್ನಾಟಕ ಬಾಲಕಿಯರ ತಂಡ 46-35ಪಾಯಿಂಟ್‌ಗಳಿಂದ ಕೇರಳ ತಂಡವನ್ನು ಮಣಿಸಿತು.

ಈ ಪಂದ್ಯದಲ್ಲಿಯು ಮಿಂಚಿನ ಪ್ರದರ್ಶನ ನೀಡಿದ್ದು ಲೋಪಮುದ್ರ. ಈ ಆಟಗಾರ್ತಿ 20 ಪಾಯಿಂಟ್ ಗಳಿಸಿದರು. ವಿರಾಮದ ವೇಳೆಗೆ ವಿಜಯಿ ತಂಡ 12-11ರಲ್ಲಿ ಅಲ್ಪ ಮುನ್ನಡೆಯಲ್ಲಿತ್ತು. ನಂತರ ಅನುಷಾ (8) ಹಾಗೂ ಸಂಧ್ಯಾ (8) ಅವರ ಉತ್ತಮ ಆಟದ ನೆರವಿನಿಂದ ಗೆಲುವಿನ ಅಂತರ ಹೆಚ್ಚಿಸಿಕೊಂಡಿತು ಎಂದು ಇಲ್ಲಿಗೆ ಬಂದಿರುವ ವರದಿಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT