ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಸ್ಕೆಟ್‌ಬಾಲ್: ಫೈನಲ್‌ಗೆ ಕರ್ನಾಟಕ ತಂಡ

Last Updated 22 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡುತ್ತಿರುವ ಕರ್ನಾಟಕ ಬಾಲಕಿಯರ ತಂಡದವರು ಲಖನೌನಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರೀಯ ಸಬ್ ಜೂನಿಯರ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಸತತ ಎರಡನೇ ಸಲ ಫೈನಲ್ ಪ್ರವೇಶಿಸಿದರು.

ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಬಾಲಕಿಯರ ತಂಡ 55-45ಪಾಯಿಂಟ್‌ಗಳಿಂದ ಮಹಾರಾಷ್ಟ್ರ ತಂಡವನ್ನು ಮಣಿಸಿತು. ವಿಜಯಿ ತಂಡ ವಿರಾಮದ ವೇಳೆಗೆ 20-23ರಲ್ಲಿ ಹಿನ್ನಡೆಯಲ್ಲಿತ್ತು. ನಂತರ ಚುರುಕಿನ ಆಟವಾಡಿ ಅಂತರದ ಗೆಲುವು ಪಡೆಯಿತು.

ಈ ಪಂದ್ಯದಲ್ಲಿ ಕರ್ನಾಟಕ ಜಯ ಗಳಿಸಲು ಲೋಪ ಮುದ್ರ ಪ್ರಮುಖ ಕಾರಣರಾದರು. ಈ ಆಟಗಾರ್ತಿ 42 ಪಾಯಿಂಟ್ ಗಳಿಸಿ ಗಮನ ಸೆಳೆದರು. ವರಲಕ್ಷ್ಮೀ 6 ಪಾಯಿಂಟ್ ಕಲೆ ಹಾಕಿದರು. ಕಳೆದ ಸಲ ಫೈನಲ್‌ನಲ್ಲಿ ಎದುರಾಗಿದ್ದ ಚತ್ತೀಸಗಡ ತಂಡದ ಎದುರು ಶುಕ್ರವಾರ ಕರ್ನಾಟಕ ತಂಡ ಫೈನಲ್ ಪಂದ್ಯವನ್ನಾಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT