ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಸ್ಕೆಟ್‌ಬಾಲ್: ಮಂಡ್ಯಕ್ಕೆ ಪ್ರಶಸ್ತಿ

Last Updated 15 ಜನವರಿ 2012, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮಂಡ್ಯದ ವಿವೇಕಾನಂದ ಬ್ಯಾಸ್ಕೆಟ್‌ಬಾಲ್ ಕ್ಲಬ್ ತಂಡ ಇಲ್ಲಿಯ ರೋವರ್ಸ್‌ ಕ್ಲಬ್ ಅಂಕಣದಲ್ಲಿ ನಡೆದ ರಾಜ್ಯಮಟ್ಟದ ಬ್ಯಾಸ್ಕೆಟ್‌ಬಾಲ್ ಟೂರ್ನಿಯಲ್ಲಿ 59-45ರಿಂದ ರೋವರ್ಸ್‌ ಕ್ಲಬ್ `ಎ~ ತಂಡವನ್ನು ಪರಾಭವಗೊಳಿಸುವ ಮೂಲಕ ಪ್ರಶಸ್ತಿ ಗೆದ್ದುಕೊಂಡಿತು.

ಅನಿಲಕುಮಾರ್ (2) ಪಾಯಿಂಟ್) ಹಾಗೂ ಅರವಿಂದ್ (15) ತಂಡದ ಗೆಲುವಿನಲ್ಲಿ ಮಿಂಚಿದರು. ಬೆಂಗಳೂರಿನ  ಮೌಂಟ್ಸ್ ಸ್ಪೋರ್ಟ್ಸ್ ಕ್ಲಬ್ ತಂಡ 30-21ರಿಂದ ತನ್ನದೇ ನಗರದ ಜಯನಗರ ಸ್ಪೋರ್ಟ್ಸ್ ಕ್ಲಬ್ ತಂಡವನ್ನು ಪರಾಭವಗೊಳಿಸುವ ಮೂಲಕ ಮಹಿಳಾ ವಿಭಾಗದ ಪ್ರಶಸ್ತಿಯನ್ನು ಪಡೆಯಿತು.

ಶಾಲಾ ಬಾಲಕರ ವಿಭಾಗದಲ್ಲಿ ಹುಬ್ಬಳ್ಳಿಯ ಸೇಂಟ್ ಮೈಕೆಲ್ಸ್ ಶಾಲಾ ತಂಡ 33-27ರಿಂದ ಧಾರವಾಡದ ಪವನ್ ಇಂಗ್ಲಿಷ್ ಮಾಧ್ಯಮ ಶಾಲೆ ವಿರುದ್ಧ ಜಯ ಸಾಧಿಸುವ ಮೂಲಕ ಪ್ರಶಸ್ತಿ ಮೇಲೆ ಹಿಡಿತ ಸಾಧಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT