ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಸ್ಕೆಟ್‌ಬಾಲ್: ಮೌಂಟ್ಸ್‌ಕ್ಲಬ್‌ಗೆ ಗೆಲುವು

Last Updated 7 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಬೆಂಗಳೂರು: ಮೌಂಟ್ಸ್ ಕ್ಲಬ್ ತಂಡದವರು ಶಿವಮೊಗ್ಗ ಯೂತ್ಸ್ ಆಶ್ರಯದಲ್ಲಿ ನಡೆಯುತ್ತಿರುವ ಅಸೋಸಿಯೇಷನ್ ಕಪ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನ ಮಹಿಳಾ ವಿಭಾಗದ ಪಂದ್ಯದಲ್ಲಿ ಶುಕ್ರವಾರ 36-14ರಲ್ಲಿ ದಕ್ಷಿಣ ಕನ್ನಡದ ನಿಟ್ಟೆಯ ಕೆ.ಎಸ್. ಹೆಗ್ಡೆ ಕ್ಲಬ್ ತಂಡವನ್ನು ಮಣಿಸಿದರು.

ಇದೇ ವಿಭಾಗದ ಇನ್ನೊಂದು ಪಂದ್ಯದಲ್ಲಿ ಬೆಂಗಳೂರಿನ ಇಂದಿರಾನಗರ ಬ್ಯಾಸ್ಕೆಟ್‌ಬಾಲ್ ಕ್ಲಬ್ ತಂಡ (ಐಬಿಸಿಸಿ) 47-30ರಲ್ಲಿ ಬೀಗಲ್ಸ್ ಕ್ಲಬ್ ವಿರುದ್ಧ ಗೆಲುವು ಪಡೆಯಿತು.ಪುರುಷರ ವಿಭಾಗದ ಪಂದ್ಯಗಳಲ್ಲಿ ಜಯನಗರಬ್ಯಾಸ್ಕೆಟ್‌ಬಾಲ್ ಕ್ಲಬ್ 46-30ರಲ್ಲಿ ಧಾರವಾಡದ ರೋವರ್ಸ್‌ ವಿರುದ್ಧವೂ, ಬೆಂಗಳೂರಿನ ಸ್ಪೋರ್ಟ್ಸ್ ಹಾಸ್ಟೆಲ್ 64-44ರಲ್ಲಿ ಕರ್ನಾಟಕ ಪೊಲೀಸ್ ತಂಡ (ಕೆಎಸ್‌ಪಿ) ವಿರುದ್ಧವೂ ಜಯ ಸಾಧಿಸಿತು. 


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT