ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಾಹ್ಮಣರ ಸಂಘಟನೆಗೆ ಸ್ವಾಮೀಜಿ ಕರೆ

Last Updated 23 ಫೆಬ್ರುವರಿ 2013, 20:12 IST
ಅಕ್ಷರ ಗಾತ್ರ

ಬೆಂಗಳೂರು: `ಬ್ರಾಹ್ಮಣರು ಸಂಘಟಿತರಾಗಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು' ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಲಹೆ ನೀಡಿದರು.

ನಗರದಲ್ಲಿ ಶನಿವಾರ ಆಯೋಜಿಸಿದ್ದ ಆನಂದ ಬಳಗದ ರಜತಾನಂದ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, `ಬ್ರಾಹ್ಮಣ ಸಮುದಾಯದ ಸಂಘಟನೆಗೆ ಹಾಗೂ ಪ್ರಗತಿಗೆ ಶ್ರಮಿಸುತ್ತಿರುವ ಬಳಗದ ಕಾರ್ಯ ಶ್ಲಾಘನೀಯ' ಎಂದರು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ವಿಷ್ಣುಮೂರ್ತಿ ಯರ್ಕಡಿತ್ತಾಯ, ಪಡುಬಿದ್ರಿ ರಾಘವೇಂದ್ರ ರಾವ್, ಎಸ್.ಟಿ.ಆರ್.ಮಡಿ, ಕೆ. ವಾಸುದೇವ ರಾವ್ ಅವರನ್ನು ಸನ್ಮಾನಿಸಲಾಯಿತು. ರಜತಾನಂದ ಮಹೋತ್ಸವ ಸ್ಮರಣ ಸಂಚಿಕೆ ಹಾಗೂ ಆನಂದ ಬಳಗದ ಸದಸ್ಯರ ಡೈರೆಕ್ಟರಿ ಬಿಡುಗಡೆ ಮಾಡಲಾಯಿತು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಡಾ.ಬಿ.ಎನ್.ಬಿ.ಸುಬ್ರಹ್ಮಣ್ಯ, ಮಂಗಳೂರಿನ ಶ್ರೀನಿವಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ರಾಘವೇಂದ್ರ ರಾವ್, ಸಂಘದ ಅಧ್ಯಕ್ಷ ಪಿ.ಎಸ್.ಬಾಗಿಲ್ತಾಯ, ಉಪಾಧ್ಯಕ್ಷರಾದ ಯು.ಬಿ.ವೆಂಕಟೇಶ್, ಗೀತಾ ವಾಸುದೇವ ರಾವ್, ಕಾರ್ಯದರ್ಶಿ ಎಂ.ಕೆ.ಗುರುಮೂರ್ತಿ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT