ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಕ್ ಹಣಕಾಸು ಸಚಿವರ ಸಭೆ

Last Updated 18 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಜಾಗತಿಕ ಆರ್ಥಿಕ ಅಸ್ಥಿರತೆ ಕುರಿತು ಚರ್ಚಿಸಲು ಬ್ರೆಜಿಲ್, ರಷ್ಯಾ, ಭಾರತ, ಚೀನಾ, ಮತ್ತು ದಕ್ಷಿಣ ಆಫ್ರಿಕಾವನ್ನು ಒಳಗೊಂಡ `ಬ್ರಿಕ್~ ದೇಶಗಳ ಹಣಕಾಸು ಸಚಿವರು ಸೆಪ್ಟೆಂಬರ್ 22ರಂದು ವಾಷಿಂಗ್ಟನ್‌ನಲ್ಲಿ ಸಭೆ ಸೇರಲಿದ್ದಾರೆ.

ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಈ ಸಭೆಯಲ್ಲಿ ಭಾಗವಹಿಸುತ್ತಿದ್ದು, ಅಮೆರಿಕ  ಮತ್ತು           ಯೂರೋಪ್ ಒಕ್ಕೂಟದ ಸಾಲದ ಬಿಕ್ಕಟ್ಟಿನಿಂದ ಜಾಗತಿಕ ಅರ್ಥ ವ್ಯವಸ್ಥೆಯ ಮೇಲಾಗಿರುವ ಪರಿಣಾಮಗಳ ಕುರಿತು ಮಾತುಕತೆ ನಡೆಸಲಿದ್ದಾರೆ.

`ಸದ್ಯದ ಆರ್ಥಿಕ ಸ್ಥಿತಿಗತಿ ಮತ್ತು ಇದಕ್ಕೆ ಸಂಬಂಧಿಸಿದಂತೆ `ಬ್ರಿಕ್~ ದೇಶಗಳು ಕೈಗೊಳ್ಳಬೇಕಾದ ಜಾಗತಿಕ ನೀತಿಯೊಂದರ ಕುರಿತು ಚರ್ಚೆ ನಡೆಯಲಿದೆ. ಭಾರತವೂ ಸೇರಿದಂತೆ ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಲ್ಲಿ ಜಾಗತಿಕ ಆರ್ಥಿಕ ಬಿಕ್ಕಟ್ಟು ಸೃಷ್ಟಿಸಲಿರುವ ಹೊಸ ಸವಾಲುಗಳ ಕುರಿತು ಮಾತುಕತೆ ನಡೆಸಲಿದ್ದೇವೆ ಎಂದು ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದರೆ ಜತೆಗೆ, `ಬ್ರಿಕ್~ ದೇಶಗಳ ಮುಖಂಡರು ಅಂತರರಾಷ್ಟ್ರೀಯ ಹಣಕಾಸು ನಿಧಿಯ ವಾರ್ಷಿಕ (ಐಎಂಎಫ್) ಸಭೆಯಲ್ಲೂ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಪ್ರಣವ್ ಮುಖರ್ಜಿ ಅವರು `ಬ್ರಿಕ್~ ದೇಶಗಳ ಹಣಕಾಸು ಸಚಿವರ ಜತೆಗೆ ದ್ವಿಪಕ್ಷೀಯ ಆರ್ಥಿಕ ಸಹಕಾರದ ಕುರಿತು ಮಾತುಕತೆ ನಡೆಸುವ ಸಾಧ್ಯತೆಗಳಿವೆ.

 ಈ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ವಾಣಿಜ್ಯ ನಿಯೋಗವೊಂದು ಸಚಿವರ ಜತೆ ವಾಷಿಂಗ್ಟನ್‌ಗೆ ತೆರಳುತ್ತಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT