ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ಗೆ ಮಲಾಲಾ

Last Updated 15 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ತಾಲಿಬಾನ್ ಉಗ್ರರು ನಡೆಸಿದ ದಾಳಿಯಲ್ಲಿ ಗಾಯಗೊಂಡು ಪಾಕಿಸ್ತಾನದ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ 14 ವರ್ಷದ ಶಾಲಾ ಬಾಲಕಿ ಮಲಾಲಾ ಯೂಸುಫ್‌ಜೈಯನ್ನು ಚಿಕಿತ್ಸೆಗಾಗಿ ಸೋಮವಾರ ಬ್ರಿಟನ್‌ಗೆ ಕೊಂಡೊಯ್ಯಲಾಯಿತು.

ಹದಿಹರೆಯದ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿಗಾಗಿ ಹೋರಾಟ ನಡೆಸುತ್ತಿರುವ ಈ ಬಾಲಕಿ ತಲೆಗೆ ತಾಲಿಬಾನ್ ಉಗ್ರರು ಗುಂಡು ಹೊಡೆದಿದ್ದರು. ನಂತರ ಈಕೆಯನ್ನು ಪಾಕಿಸ್ತಾನದ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬ್ರಿಟನ್ ಸರ್ಕಾರವು ಉನ್ನತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ತಿಳಿಸಿದ್ದರಿಂದ ಬ್ರಿಟನ್‌ಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಪಾಕ್ ತಿಳಿಸಿದೆ.

`ತಾಲಿಬಾನ್ ಉಗ್ರರು ಮತ್ತೆ ದಾಳಿ ನಡೆಸುವ ಬೆದರಿಕೆ ಹಾಕಿದ್ದ ಕಾರಣ ಆಕೆಯನ್ನು ಬ್ರಿಟನ್‌ಗೆ ಸಾಗಿಸುವ ವಿಷಯ ರಹಸ್ಯವಾಗಿ ಇಡಲಾಗಿತ್ತು~ ಎಂದು ಪಾಕ್  ಭದ್ರತಾ ಸಚಿವ ರೆಹಮಾನ್ ಮಲಿಕ್ ತಿಳಿಸಿದ್ದಾರೆ.
`ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸುತ್ತಿರುವ ಪಾಕಿಸ್ತಾನಕ್ಕೆ ನಮ್ಮ ಸರ್ಕಾರ ಸಹಕಾರ ನೀಡಲಿದೆ~ ಎಂದು ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ವಿಲಿಯಂ ಹೇಗ್ ತಿಳಿಸಿದ್ದಾರೆ.

ಪತ್ರಕರ್ತರಿಗೆ ಭದ್ರತೆ
 ತಾಲಿಬಾನ್ ಉಗ್ರರ ದಾಳಿ ಬೆದರಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮಾಧ್ಯಮ ಸಂಸ್ಥೆಗಳು ಮತ್ತು ಕೆಲ ಪ್ರಮುಖ ಟಿ.ವಿ. ಚಾನೆಲ್‌ಗಳ ನಿರೂಪಕರಿಗೆ ಭದ್ರತೆ ಒದಗಿಸಲಾಗಿದೆ ಎಂದು ಸಚಿವ  ಮಲಿಕ್ ತಿಳಿಸಿದ್ದಾರೆ.

 ಮಲಾಲಾ ಮೇಲೆ ನಡೆಸಿದ್ದ ದಾಳಿ ಕುರಿತು ಸುದ್ದಿ ಬಿತ್ತರಿಸುತ್ತಿರುವವರ ವಿರುದ್ಧ ಸೇಡು ತೀರಿಸಿಕೊಳ್ಳುವುದಾಗಿ ಉಗ್ರರು ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ಸರ್ಕಾರ ಭದ್ರತೆ ಒದಗಿಸಿದೆ.

ಪೊಲೀಸರ ಮೇಲೆ ದಾಳಿ:  ಪಖ್ತುನ್‌ಖ್ವಾ ಪೊಲೀಸ್ ತಪಾಸಣಾ ಕೇಂದ್ರದ ಮೇಲೆ 300 ಉಗ್ರರು ನಡೆಸಿದ ದಾಳಿಯಲ್ಲಿ  7 ಪೊಲೀಸರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT