ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರೆಜಿಲ್ ಸಚಿವರ ಭಾರತ ಪ್ರವಾಸ

Last Updated 2 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬ್ರೆಜಿಲ್ (ಎಎಫ್‌ಪಿ): `ಭಾರತದೊಂದಿಗೆ ರಕ್ಷಣಾ ಸಂಬಂಧ ಸುಧಾರಣೆಗಾಗಿ ದ್ವಿಪಕ್ಷೀಯ ಮಾತುಕತೆ ನಡೆಸಲು ಬ್ರೆಜಿಲ್‌ನ ರಕ್ಷಣಾ ಸಚಿವ ಸೆಲ್ಸೊ ಅಮೊರಿಮ್ ಅವರು ಈ ವಾರ ಭಾರತಕ್ಕೆ ಭೇಟಿ ನೀಡಲಿದ್ದಾರೆ~ ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ.

ಶನಿವಾರ ದೆಹಲಿ ತಲುಪುವ ಅವರು, ಪ್ರಧಾನಿ ಮನಮೋಹನ್‌ಸಿಂಗ್, ರಕ್ಷಣಾ ಸಚಿವ ಎ.ಕೆ.ಆಂಟನಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ.

`ಐದು ದಿನಗಳ ಪ್ರವಾಸದಲ್ಲಿ ಬ್ರಿಕ್ಸ್ ಒಕ್ಕೂಟದ ಸದಸ್ಯರಾಗಿರುವ ಭಾರತ ಮತ್ತು ಬ್ರೆಜಿಲ್ ನಡುವೆ ರಕ್ಷಣಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗಾಗಿ ಉಭಯ ರಾಷ್ಟ್ರಗಳು ಮಾತುಕತೆ ನಡೆಸಲಿವೆ~ ಎಂದು ಮೂಲಗಳು ತಿಳಿಸಿವೆ.
 
ಭಾರತ ವಿಶ್ವದಲ್ಲೇ ಹೆಚ್ಚು ಶಸ್ತ್ರಾಸ್ತ್ರಗಳನ್ನು ಹೊಂದಿರುವ ದೊಡ್ಡ ರಾಷ್ಟ್ರವಾಗಿದ್ದು, ಅದೇ ರೀತಿ  ಬ್ರೆಜಿಲ್ ಕೂಡ ರಕ್ಷಣಾ ಕ್ಷೇತ್ರ ಬಲಗೊಳಿಸಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಅನ್ಯದೇಶಗಳ ಮೇಲಿನ ತಂತ್ರಜ್ಞಾನ ಅವಲಂಬನೆಯನ್ನು ಕಡಿತಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT