ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭರ್ತಿಯಾದ ಮೆಟ್ಟೂರು ಜಲಾಶಯ

Last Updated 5 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ಸೇಲಂ (ಪಿಟಿಐ): ತಮಿಳುನಾಡಿನಲ್ಲಿ ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿರುವ ಮೆಟ್ಟೂರು ಜಲಾಶಯವು ಎಂಟು ವರ್ಷದ ನಂತರ ಭರ್ತಿಯಾಗಿದೆ.

ಜಲಾಶಯದ ಗರಿಷ್ಠ ನೀರಿನ ಮಟ್ಟ 120 ಅಡಿ ಆಗಿದ್ದು, ಭಾನುವಾರ ರಾತ್ರಿ  ನೀರಿನ ಮಟ್ಟ 121 ಅಡಿ ದಾಟಿತು ಎಂದು ಲೋಕೋಪಯೋಗಿ ಇಲಾಖೆ ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಭಾರಿ ಮಳೆ ಕಾರಣ, ಕೃಷ್ಣರಾಜ ಸಾಗರ ಅಣೆಕಟ್ಟೆಯಿಂದ ಇತ್ತೀಚೆಗೆ ಹೆಚ್ಚುವರಿ ನೀರು ಬಿಡುಗಡೆ ಮಾಡಿದ್ದರಿಂದ, ಮೆಟ್ಟೂರು ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬಂದು ಭರ್ತಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT