ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭರ್ತಿಯಾದ ಲಿಂಗನಮಕ್ಕಿ: ನೀರು ಹೊರಕ್ಕೆ

Last Updated 18 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಕಾರ್ಗಲ್: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಲಿಂಗನಮಕ್ಕಿ ಜಲಾಶಯ ಗರಿಷ್ಠ ಮಟ್ಟ ತಲುಪಿದ್ದು, ಒಳಹರಿವು ಹೆಚ್ಚುತ್ತಿರುವ ಕಾರಣ ಬುಧ­ವಾರ 10 ಸಾವಿರ ಕ್ಯೂಸೆಕ್ ನೀರನ್ನು 5 ಕ್ರೆಸ್ಟ್ ಗೇಟ್‌ಗಳ ಮೂಲಕ ಹೊರ ಬಿಡಲಾಗಿದೆ.

ತೀರ್ಥಹಳ್ಳಿ, ಹೊಸನಗರ, ಮಾಸ್ತಿ ಕಟ್ಟೆ, ತುಮರಿ, ಬ್ಯಾಕೋಡು ಭಾಗ­ಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾ­ಶಯಕ್ಕೆ ಹೆಚ್ಚು ನೀರು ಹರಿದು ಬರುತ್ತಿದೆ. ನದಿ ತೀರದ ನಿವಾಸಿ­ಗಳಿಗೆ ಈಗಾಗಲೇ ಜಾಗೃತರಾಗಿ­ರುವಂತೆ ಎಚ್ಚರಿಕೆಯ ಸಂದೇಶ ಕಳುಹಿಸ­ಲಾಗಿದೆ.

ಕೆಪಿಸಿಯ ಉನ್ನತ ಅಧಿಕಾರಿ­ಗಳು, ಭದ್ರತಾ ವಿಭಾ­ಗದ ಪ್ರತ್ಯೇಕ ತಂಡಗಳನ್ನು ನದಿ ತೀರದ ನಿವಾಸಿಗಳ ಸುರಕ್ಷತೆಗಾಗಿ ನಿಯೋಜನೆ ಮಾಡ­ಲಾಗಿದೆ ಎಂದು ಕೆಪಿಸಿ ಮುಖ್ಯ ಎಂಜಿನಿಯರ್ ರಾಜಮುಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT