ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭವಿಷ್ಯ ನುಡಿದಿದ್ದ ಚಂದ್ರಸ್ವಾಮಿ

Last Updated 8 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಲಂಡನ್ (ಐಎಎನ್‌ಎಸ್): ಮಾರ್ಗರೇಟ್ ಥ್ಯಾಚರ್ ವಿರೋಧ ಪಕ್ಷದ ನಾಯಕಿಯಾಗಿದ್ದ ಸಂದರ್ಭದಲ್ಲಿ ಭಾರತ ಮೂಲದ ಸ್ವಯಂ ಘೋಷಿತ ದೇವಮಾನವ ಚಂದ್ರಸ್ವಾಮಿ, ಥ್ಯಾಚರ್ ಅವರು ಬ್ರಿಟನ್ನಿನ ಪ್ರಧಾನಿಯಾಗುತ್ತಾರೆಂದು ಭವಿಷ್ಯ ನುಡಿದಿದ್ದರು ಎನ್ನಲಾಗಿದೆ.

ಥ್ಯಾಚರ್ ಅವರು 1975ರಲ್ಲಿ ವಿರೋಧ ಪಕ್ಷದ ನಾಯಕಿಯಾಗಿದ್ದಾಗ ಚಂದ್ರಸ್ವಾಮಿ ಅವರನ್ನು ರಹಸ್ಯವಾಗಿ ತಮ್ಮ ಕಚೇರಿಯಲ್ಲಿ ಭೇಟಿಯಾಗಿದ್ದರು. ಆಗ ಚಂದ್ರಸ್ವಾಮಿ, ಥ್ಯಾಚರ್ ಅವರು ಇನ್ನು ನಾಲ್ಕು ವರ್ಷಗಳಲ್ಲಿ ಬ್ರಿಟನ್ನಿನ ಪ್ರಧಾನಿಯಾಗುತ್ತಾರೆಂದೂ, ಒಂದು ದಶಕಕ್ಕೂ ಹೆಚ್ಚು ಕಾಲ ಅವರು ಅಧಿಕಾರದಲ್ಲಿರುತ್ತಾರೆಂದೂ ಹೇಳಿದ್ದರು ಎಂದು `ಡೈಲಿ ಮೇಲ್' ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT