ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭವಿಷ್ಯಕ್ಕೆ ಆದ್ಯತೆ ನೀಡಿ: ಅಂಥೋಣಿ ಕಿವಿಮಾತು

Last Updated 25 ಜನವರಿ 2012, 5:20 IST
ಅಕ್ಷರ ಗಾತ್ರ

ಕುರುಗೋಡು: ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನ ರೂಪಿಸಿಕೊಳ್ಳಲು ಅತಿ ಪ್ರಮುಖ ಘಟ್ಟವಾಗಿದ್ದು, ಮಾನಸಿಕವಾಗಿ ವಿಚಲಿತರಾಗದೆ ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ. ಅಂಥೋಣಿ ಹೇಳಿದರು.

ಬಾಲ ವಿಕಾಸ ಅಕಾಡೆಮಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗದಲ್ಲಿ  ಎಂ.ಡಿ.ಎಂ.ಎಂ. ಶಾಲೆಯಲ್ಲಿ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಿದ್ದತೆ ಕುರಿತು ಏರ್ಪಡಿಸಿದ್ದ ಶಿಬಿರದಲ್ಲಿ ಮಾತನಾಡಿದರು.

ಹದಿ ಹರೆಯದ ಹೊಸ್ತಿಲಲ್ಲಿರುವ ವಿದ್ಯಾರ್ಥಿಗಳಿಗೆ ದೈಹಿಕ ಮತ್ತು ಮಾನಸಿಕ ಬದಲಾವಣೆಯ ಕಾಲ ಘಟ್ಟ. ಈ ಸಂದರ್ಭದಲ್ಲಿ ಮಾನಸಿಕ ಆಲೋಚನೆಗಳಿಗೆ ಮನ್ನಣೆ ನೀಡದೆ ಭವಿಷ್ಯದ ಬಗ್ಗೆ ಚಿಂತನೆ ಮಾಡಿ, ಅಧ್ಯಯನ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಎನ್.ಎಂ. ಗಾಯಿತ್ರಮ್ಮ ಕಾರ್ಯಕ್ರಮ ಉದ್ಘಾಟಿಸಿದರು.

ಎನ್. ಶಿವರುದ್ರಗೌಡ್ರು ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಗಾಳಿ ಮಾರುತಿ, ರಮೇಶ್, ಶಂಭುಲಿಂಗ, ಶ್ರೀನಿವಾಸ, ಬಸವರಾಜ ಶಿಬಿರದಲ್ಲಿ ಮಾದರಿ ಪಾಠ ಬೋಧನೆ ಮಾಡಿದರು.

ಶಿಶುಭಿವೃದ್ಧಿ ಯೋಜನಾಧಿಕಾರಿ ಸೋಮಶೇಖರ್, ಶಿಕ್ಷಣ ಸಂಯೋಜಕ ಕೆ. ಗಾದಿಲಿಂಗಪ್ಪ, ಎನ್. ಮಂಜುನಾಥ ಗೌಡ, ಎನ್.ನಾಗನಗೌಡ, ಡಾ. ಹರಳೇಳಿ ಮಠ್ ಶಾಮ್ ಉಪಸ್ಥಿತರಿದ್ದರು.

ಅಂಗನವಾಡಿ ಮೇಲ್ವಿಚಾರಕಿ ಕವಿತಾ ನಿರೂಪಿಸಿದರು. ಶಿಕ್ಷಕಿ ಟಿ.ಮಲ್ಲಮ್ಮ ಸ್ವಾಗತಿಸಿ ವಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT