ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭವಿಷ್ಯದ ಕನಸಿನ ಅನಾವರಣ

Last Updated 9 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿರುವ ಸಿಎಂಆರ್ ನ್ಯಾಷನಲ್ ಪಿಯು ಕಾಲೇಜು ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ `ನೋವಮ್ 2012~ ಕಾರ್ಯಕ್ರಮ ಜ್ಞಾನ ವಿನಿಮಯಕ್ಕೆ ಅವಕಾಶ ಕಲ್ಪಿಸಿಕೊಟ್ಟಿತು.  

ಈ ಕಾರ್ಯಕ್ರಮ ಯುವ ಪ್ರತಿಭೆಗಳ ಕ್ರಿಯಾಶೀಲತೆ ಹಾಗೂ ಹೊಸ ಅವಿಷ್ಕಾರಗಳ ಅನಾವರಣಕ್ಕೆ ಸಾಕ್ಷಿಯಾಯಿತು. ವಿಜ್ಞಾನ ಹಾಗೂ ವಾಣಿಜ್ಯ ವಿಷಯಕ್ಕೆ ಸಂಬಂಧಪಟ್ಟ ಭವಿಷ್ಯದ ಕನಸುಗಳ ಸುಮಾರು 25 ಮಾದರಿಯನ್ನು ವಿದ್ಯಾರ್ಥಿಗಳು ಇಲ್ಲಿ ಪ್ರದರ್ಶಿಸಿದರು.
 
ಈ ಪ್ರತಿಭೆಗಳ ಕನಸುಗಳ ಅನಾವರಣಕ್ಕೆ ಕಳಶಪ್ರಾಯ ಎಂಬಂತೆ ತೀರ್ಪುಗಾರರು ವಿದ್ಯಾರ್ಥಿಗಳ ಪ್ರಾಯೋಗಿಕ ಹಾಗೂ ಸ್ನೇಹಪರ ಪ್ರತಿಭೆಯನ್ನು ಮೆಚ್ಚಿ ವಿಜೇತರಿಗೆ ಬಹುಮಾನ ನೀಡಿ ಪುರಸ್ಕರಿಸಿ ಬೆನ್ನುತಟ್ಟಿದರು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿಜ್ಞಾನಿಗಳು ಪಾಲ್ಗೊಂಡಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT