ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾನುವಾರ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ

Last Updated 7 ಡಿಸೆಂಬರ್ 2013, 11:06 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗಳ ಉಪಾಂತ್ಯ ಎಂದೇ ಪರಿಗಣಿಸಲಾಗಿರುವ ದೆಹಲಿ, ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸ್ ಗಢ ಈ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶವು ಭಾನುವಾರ ಮತಗಳ ಎಣಿಕೆಯೊಂದಿಗೆ ಹೊರ ಬೀಳಲಿದೆ.

ಚುನಾವಣೆ ನಡೆದಿರುವ ಮಿಜೋರಾಂನಲ್ಲಿ ಮಾತ್ರ ಡಿಸೆಂಬರ್ 9ರಂದು ಮತಗಳ ಎಣಿಕೆ ನಡೆಯಲಿದೆ.
ದೆಹಲಿಯಲ್ಲಿ ಶೇಕಡಾ 60ಕ್ಕಿಂತ ಹೆಚ್ಚು ಮತದಾನವಾಗಿದ್ದರೆ, ಮಿಜೋರಾಂನಲ್ಲಿ ಶೇಕಡಾ 81ಕ್ಕೂ ಹೆಚ್ಚು ಮತದಾನವಾಗಿತ್ತು. ರಾಜಸ್ತಾನದಲ್ಲಿ ಶೇಕಡಾ 74 ಹಾಗೂ ಛತ್ತೀಸ್ ಗಢದಲ್ಲಿ ಶೇಕಡಾ 70ರಷ್ಟು ಮತದಾನವಾಗಿತ್ತು.

ಬಿಜೆಪಿಯ ಘೋಷಿತ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಈ ಚುನಾವಣೆಗಳ ಪ್ರಚಾರದ ಸಾರಥ್ಯ ವಹಿಸಿದ್ದ ಹಿನ್ನೆಲೆಯಲ್ಲಿ ಈ ಚುನಾವಣೆಯಲ್ಲಿ ಪಕ್ಷವು ಮಾಡಬಹುದಾದ ಸಾಧನೆ ಬಗ್ಗೆ ಎಲ್ಲರೂ ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ.

ಇನ್ನೊಂದೆಡೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆಯು  ಮುಂದಿನ ವರ್ಷದ ಚುನಾವಣೆಗಳಲ್ಲಿ ಪಕ್ಷವನ್ನು ಮುನ್ನಡೆಸುವ ರಾಹುಲ್ ಗಾಂಧಿ ಅವರ ಸಾಮರ್ಥ್ಯವನ್ನು ಒರೆಗೆ ಹಚ್ಚಲಿದೆ.

ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್ ಗಢದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಹಣಾಹಣಿ ನಡೆದಿದ್ದರೆ, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಪ್ರವೇಶದಿಂದಾಗಿ ತ್ರಿಕೋಣ ಹೋರಾಟ ನಡೆದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಿಗೆ ತಲೆನೋವು ತಂದಿದೆ.

ಚುನಾವಣೆ ನಂತರ ನಡೆದ ಮತಗಟ್ಟೆ ಸಮೀಕ್ಷೆಗಳು ಈ ರಾಜ್ಯಗಳಲ್ಲಿ ಕಾಂಗ್ರೆಸ್ ಪರಾಭವದ ಸಾಧ್ಯತೆ ಬಗ್ಗೆ ಭವಿಷ್ಯ ನುಡಿದಿದ್ದು, ಬಿಜೆಪಿ ಉತ್ತಮ ಸಾಧನೆ ಮಾಡುವ ಬಗ್ಗೆ ಮುನ್ಷೂಚನೆ ನೀಡಿವೆ. ಮಧ್ಯಪ್ರದೇಶ ಮತ್ತು ಛತ್ತೀಸ್ ಗಢದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳಬಹುದು ಮತ್ತು ರಾಜಸ್ತಾನದಲ್ಲಿ ಅಧಿಕಾರವನ್ನು ಮರುವಶ ಪಡಿಸಿಕೊಳ್ಳಬಹುದು ಎಂದು ಈ ಸಮೀಕ್ಷೆಗಳು ಅಂದಾಜು ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT