ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ, ಚೀನಾ, ಬ್ರೆಜಿಲ್‌ನ ಬೇಡಿಕೆ ತೈಲ ಬೆಲೆ ಏರಿಕೆಗೆ ಕಾರಣ: ಒಬಾಮ

Last Updated 24 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ಭಾರತ, ಚೀನಾ ಹಾಗೂ ಬ್ರೆಜಿಲ್‌ನಂತಹ ದೇಶಗಳಲ್ಲಿ ಪೆಟ್ರೋಲಿಯಂ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆ ಮುಂಬರುವ ವರ್ಷಗಳಲ್ಲಿ ತೈಲ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅಭಿಪ್ರಾಯಪಟ್ಟಿದ್ದಾರೆ.

ಫ್ಲೋರಿಡಾದಲ್ಲಿ ಮಾಡಿದ ಭಾಷಣದಲ್ಲಿ ಈ ಅಂಶ ಪ್ರಸ್ತಾಪಿಸಿರುವ ಅವರು, ಮಧ್ಯ ಏಷ್ಯಾದ ಅಸ್ಥಿರತೆ ಪ್ರಸಕ್ತ ತೈಲ ಬೆಲೆ ಏರುಪೇರಿಗೆ ಕಾರಣವಾಗಿದೆ. ಆದರೆ ಮುಂದಿನ ಕೆಲ ವರ್ಷಗಳಲ್ಲಿ ಭಾರತ, ಬ್ರೆಜಿಲ್, ಚೀನಾಗಳಿಂದ ಬರುವ ಅತಿ ಬೇಡಿಕೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಗೆ ದಾರಿ ಮಾಡಿಕೊಡಲಿದೆ ಎಂದಿದ್ದಾರೆ.

ಇನ್ನೈದು ವರ್ಷಗಳಲ್ಲಿ ಚೀನಾದಲ್ಲಿ ಓಡುವ ಕಾರುಗಳ ಸಂಖ್ಯೆ ತ್ರಿಗುಣಗೊಳ್ಳಲಿದೆ. ಅದಕ್ಕೆ ಎಷ್ಟು ಪೆಟ್ರೋಲ್ ಬೇಕಾಗುತ್ತದೆ ಎಂದು ಒಬಾಮ ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT