ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ -ವಿಯೆಟ್ನಾಂ ರಕ್ಷಣಾ ಒಪ್ಪಂದಕ್ಕೆ ಸಹಿ

Last Updated 17 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ, (ಐಎಎನ್‌ಎಸ್):  ರಕ್ಷಣಾ ಸಂಬಂಧವನ್ನು ಇನ್ನಷ್ಟು ಬಲಪಡಿಸಿಕೊಳ್ಳಲು ಭಾರತ ಮತ್ತು ವಿಯೆಟ್ನಾಂ ಒಪ್ಪಿಕೊಂಡಿವೆ.

ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ಮತ್ತು ವಿಯೆಟ್ನಾಂ ವಿದೇಶಾಂಗ ಸಚಿವ ಫಾಂ ಬಿನ್ಹಾಮಿಹಾ ಅವರು ಹನಾಯ್‌ಯಲ್ಲಿ ರಕ್ಷಣಾ ಸಂಬಂಧ ಬಲಪಡಿಸುವ ಒಪ್ಪಂದಕ್ಕೆ ಸಹಿ ಹಾಕಿರುವ ಕುರಿತ ವಿವರಗಳನ್ನು ಶನಿವಾರ ಇಲ್ಲಿನ ವಿದೇಶಾಂಗ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಯೆಟ್ನಾಂ ನೌಕಾಪಡೆ ಯೋಧರಿಗೆ ರಷ್ಯಾ ನಿರ್ಮಿತ ಜಲಾಂತರ್ಗಾಮಿ ನಿರ್ವಹಣೆಗೆ ಅಗತ್ಯವಾದ ತರಬೇತಿಯನ್ನು ನೀಡಲು ಭಾರತ ಒಪ್ಪಿಕೊಂಡಿದೆ.  

ಕೃಷ್ಣ ಅವರು ಹನಾಯ್‌ಗೆ ಮೂರು ದಿನಗಳ ಅಧಿಕೃತ ಪ್ರವಾಸ ಕೈಗೊಂಡಿದ್ದು ವ್ಯಾಪಾರ, ಬಂಡವಾಳ ಹೂಡಿಕೆ, ಶಿಕ್ಷಣ, ಸಾಂಸ್ಕೃತಿಕ ರಂಗಗಳಲ್ಲಿ ಇನ್ನೂ ಹೆಚ್ಚಿನ ಸಹಕಾರ ಸಾಧಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT