ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ಶುಭಾರಂಭ

Last Updated 15 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):ಪ್ರಭಾವಿ ಪ್ರದರ್ಶನ ತೋರಿದ ಭಾರತ ಮಹಿಳಾ ಹಾಕಿ ತಂಡದವರು ಇಲ್ಲಿ ಆರಂಭವಾದ ನಾಲ್ಕು ಪಂದ್ಯಗಳನ್ನೊಳಗೊಂಡ ಹಾಕಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದರು.

ಇಲ್ಲಿನ ಮೇಜರ್ ಧ್ಯಾನಚಂದ್ ರಾಷ್ಟ್ರೀಯ ಹಾಕಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಭಾರತ 3-0ಗೋಲುಗಳಿಂದ ಅಜರ್‌ಬೈಜಾನ್ ತಂಡವನ್ನು ಮಣಿಸಿತು.

ಆರಂಭದಿಂದಲೂ ಆತಿಥೇಯ ರಾಷ್ಟ್ರದವರು ತೋರಿದ ಮಿಂಚಿನ ಹೋರಾಟದಿಂದ ಈ ಗೆಲುವು ಸಾಧ್ಯವಾಯಿತು. ಅನುರಾಧಾ ದೇವಿ 19ನೇ ನಿಮಿಷದಲ್ಲಿ ಗೋಲಿನ ಖಾತೆ ತೆರೆದರು. ಸುಂದರಾ 51ನೇ ನಿಮಿಷದಲ್ಲಿ ಗೋಲು ತಂದಿಟ್ಟರೆ, ಜೈಯ್‌ದೀಪ್ ಕೌರ್ 61ನೇ ನಿಮಿಷದಲ್ಲಿ ಮೂರನೇ ಗೋಲು ಗಳಿಸಿ ಗೆಲುವಿನ ಅಂತರ ಹೆಚ್ಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT